ವಿಜಯನಗರ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬಂದ್ರೂ ನಾವು ಬಿಜೆಪಿ ಟಿಕೆಟ್ ಕೊಡ್ತೀವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಗೆ ಬಿಜೆಪಿ ಟಿಕೆಟ್ ಕೊಡ್ತೀರಾ ಅನ್ನೋ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.
ಹೊಸಪೇಟೆಯಲ್ಲಿ ಮಾತನಾಡಿದ ಕಟೀಲ್, ನಾವು ಪಕ್ಷ ಗೆಲ್ಲೋಕೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋಕೆ ಏನು ಬೇಕು ಅದನ್ನು ಮಾಡುತ್ತೇವೆ. ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ನಾನು ಬಿಜೆಪಿಯ ರಾಜ್ಯಾಧ್ಯಕ್ಷ, ನಾನು ಕೂಡ ಮುಂದೆ ಆಕಾಂಕ್ಷಿ, ಆದರೆ ಅಭ್ಯರ್ಥಿಯಲ್ಲವೆಂದು ಕಟೀಲ್ ಹೇಳಿದರು.
ಇದನ್ನೂ ಓದಿ: ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೆಗೆ 250 ರೂ. ಟೋಲ್ ನಿಗದಿ ಸಾಧ್ಯತೆ
ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಇದೇ ವೇಳೆ ಹರಿಹಾಯ್ದ ಕಟೀಲ್, ಕಾಂಗ್ರೆಸ್ ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಬರಲಿ, ಎಚ್.ಡಿ.ಕುಮಾರಸ್ವಾಮಿಯವರ ರೀತಿ ಒಂದು ಸಮುದಾಯಕ್ಕೆ ಬಯ್ಯೋದು, ಸಿದ್ದರಾಮಯ್ಯರ ರೀತಿ ನಾವು ಟಿಪ್ಪು ವಂಶಸ್ಥರು ಅಂತ ಹೇಳೋ ಪರಿಸ್ಥಿತಿ ಬಿಜೆಪಿಗೆ ಇಲ್ಲವೆಂದು ಹೇಳಿದರು.
ಚುನಾವಣೆ ಕಾರ್ಯ ಮತ್ತು ಕೆಲಸಗಳನ್ನು ಕಾಂಗ್ರೆಸ್-ಜೆಡಿಎಸ್ ದಾರಿ ತಪ್ಪಿಸುತ್ತಿದೆ. ಕಾಂಗ್ರೆಸ್ ನಾಯಕರು ಟೀಕೆ ಮಾಡೋಕೆ ಇರೋದು. ಅಭಿವೃದ್ಧಿಯ ವಿಚಾರವಾಗಿ ಅವರು ಚರ್ಚೆಗೆ ಬರಲಿ ಎಂದು ಕಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಫೆಬ್ರವರಿ 15ರಂದು ಆಮ್ ಆದ್ಮಿ ಪಾರ್ಟಿಯಿಂದ "ಪೊರಕೆಯೇ ಪರಿಹಾರ" ಯಾತ್ರೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.