ಬೆಂಗಳೂರು : ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ಸಿಗರಿಗೆ ಸವಾಲ್ ಹಾಕಿದೆ.
ʼಭಾರತ್ ಜೋಡೋ ಯಾತ್ರೆʼ ಮತ್ತು ʼಹಿಂದಿ ದಿವಸ್ʼ ಕುರಿತು ಕಮಲಪಾಳಯ ಮತ್ತು ಕಾಂಗ್ರೆಸ್ ನಡುವೆ ಟಾಕ್ ವಾರ್ ನಡೆದಿದೆ. ಹಿಂದಿ ದಿವಸ್ ಆಚರಣೆ ಕುರಿತು ಕಾಂಗ್ರೆಸ್ ಬಿಜೆಪಿ ಮೇಲೆ ಹರಿಹಾಯ್ದಿದೆ. ಮೋದಿ ಸರ್ಕಾರ ಎನ್‌ಇಪಿ ಮೂಲಕ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿದೆ. ಆದರೆ ಕಾಂಗ್ರೆಸ್ ರಾಷ್ಟ್ರವ್ಯಾಪಿ ತ್ರಿಭಾಷಾ ಸೂತ್ರ ಹೇರಿತು. ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ಎಂದು ಪ್ರಶ್ನೆ ಮಾಡಿದೆ.
ಸಿದ್ದರಾಮಯ್ಯನವರೇ,
ಮೋದಿ ಸರ್ಕಾರ ಎನ್‌ಇಪಿ ಮೂಲಕ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿದೆ.
ಆದರೆ @INCIndia ರಾಷ್ಟ್ರವ್ಯಾಪಿ #HindiDiwas, ತ್ರಿಭಾಷಾ ಸೂತ್ರ ಹೇರಿತು.
ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? pic.twitter.com/yycq5ug8lg
— BJP Karnataka (@BJP4Karnataka) September 14, 2022
ಇದನ್ನೂ ಓದಿ: ಸರ್ಕಾರ, ಟೆಲಿಕಾಂ ಕಂಪನಿಗೆ ಮೋಸ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್
ಅಲ್ಲದೆ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡುವ ಪ್ರಧಾನಿ ನರೇಂದ್ರ ಮೋದಿ ಆಶಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಕನ್ನಡ ಕಡ್ಡಾಯದ ಹೊಸ ಕಾನೂನಿನ ಮೂಲಕ ಪೂರೈಸಿದೆ. ಜೊತೆಗೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅನುವು ಮಾಡಿಕೊಡುವ ಮೂಲಕ ಕನ್ನಡ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧತೆ ತೋರಿದೆ ಎಂದು ಹೇಳಿದೆ.
ಡಿಕೆಶಿ ಮತ್ತು ಸಿದ್ದು ಸಂಬಂಧ ಬೂದಿ ಮುಚ್ಚಿದ ಕೆಂಡದಂತೆ
ಸಿದ್ದರಾಮೋತ್ಸವಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುನಿಸಿಕೊಂಡಿದ್ದರು. ಈಗ ಭಾರತ್ ಜೋಡೋ ಯಾತ್ರೆಗೆ ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರೆ. ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವಿನ ಸಂಬಂಧ ಬೂದಿ ಮುಚ್ಚಿದ ಕೆಂಡದಂತಿದೆ. ತೋರ್ಪಡಿಕೆಗಷ್ಟೇ ಅವರು ನಗುತ್ತಾರೆ, ಒಳಗೊಳಗೆ ಕತ್ತಿ ಮಸೆಯುತ್ತಾರೆ ಎಂದು ಬಜೆಪಿ ವ್ಯಂಗ್ಯವಾಡಿದೆ. ಅಲ್ಲದೆ, ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದರಾಮಯ್ಯ ಬಣ ತೊಡಗಿಸಿಕೊಳ್ಳುವುದಿಲ್ಲವೇ? ಎಂದು ಪ್ರಶ್ನೆಮಾಡಿದ್ದಾರೆ.
ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ,
ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ.ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ.
ಕೇಂದ್ರದ@BJP4India
ಸರ್ಕಾರ #ಹಿಂದಿದಿವಸ
ಆಚರಿಸಿ
ಹಿಂದಿ ಭಾಷೆಯ ಹೆಸರಲ್ಲಿ
ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು
ನಾನು ಖಂಡಿಸುತ್ತೇನೆ.#ಹಿಂದಿದಿವಸ್— Siddaramaiah (@siddaramaiah) September 14, 2022
ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ
ಬಿಜೆಪಿ ಹಿಂದಿ ದಿವಸ್ ಕುರಿತು ಟ್ಟೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕೇಂದ್ರದ ಬಿಜೆಪಿ ಸರ್ಕಾರ ಹಿಂದಿದಿವಸ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್‌ಎಸ್‌ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.