ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಬಿಜೆಪಿ ಒಂದು ರೂ.ಕೊಟ್ಟಿಲ್ಲ;  ಸಚಿವ ಶಿವರಾಜ್ ತಂಗಡಗಿ

 ಏ.30: ಬಿಜೆಪಿಯವರಿಗೆ ಮಾತನಾಡಲು ಮಾತ್ರ ರಾಮನಾ? ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ‌ ಅನುದಾನ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿ ಸುಳ್ಳು ಹೇಳಿದ ಪಕ್ಷ ಬಿಜೆಪಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Written by - Prashobh Devanahalli | Edited by - Manjunath N | Last Updated : Apr 30, 2024, 11:56 PM IST
  • ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ವೇಳೆ ನಮ್ಮ ಸರ್ಕಾರ ಬಡವರಿಗೆ ಉಚಿತವಾಗಿ ಏಳು ಕೆ.ಜಿ.ಅಕ್ಕಿ ನೀಡುತ್ತಿತ್ತು.
  • ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಐದು ಕೆ.ಜಿ.ಗೆ ಇಳಿಸಿತ್ತು.
  • ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಉಚಿತವಾಗಿ ಅಕ್ಕಿ ಕೊಡುವುದನ್ನು ಎರಡು ಕೆ.ಜಿ.ಗೆ ಇಳಿಸುತ್ತಿದ್ದರು ಎಂದು ಲೇವಡಿ ಮಾಡಿದರು.
 ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಬಿಜೆಪಿ ಒಂದು ರೂ.ಕೊಟ್ಟಿಲ್ಲ;  ಸಚಿವ ಶಿವರಾಜ್ ತಂಗಡಗಿ title=

ಗಂಗಾವತಿ:  ಏ.30: ಬಿಜೆಪಿಯವರಿಗೆ ಮಾತನಾಡಲು ಮಾತ್ರ ರಾಮನಾ? ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ‌ ಅನುದಾನ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿ ಸುಳ್ಳು ಹೇಳಿದ ಪಕ್ಷ ಬಿಜೆಪಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ವತಿಯಿಂದ ಲೋಕಸಭಾ ಚುನಾವಣೆ ನಿಮಿತ್ತ ಗಂಗಾವತಿ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಂದಿನ ಬಿಜೆಪಿ ಸರ್ಕಾರ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ಘೋಷಿಸಿ, ಭೂಮಿ ಪೂಜೆ ಮಾಡಿದ್ದರು. ಆದರೆ ಒಂದೇ ಒಂದು ರುಪಾಯಿ ಅನುದಾನವನ್ನು ಇಟ್ಟಿಲ್ಲ. ಆದರೆ ಅಧಿಕಾರಕ್ಕೆ ಬಂದ ತಕ್ಷಣ ಮೊದಲ ಬಜೆಟ್ ನಲ್ಲಿ 100 ಕೋಟಿ ಘೋಷಿಸಿ, ಅನುದಾನ ಮೀಸಲಿಟ್ಟವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು. ನಿಜಕ್ಕೂ ರಾಮನಂತೆ ನುಡಿದಂತೆ ನಡೆಯುತ್ತಿರುವವರು ಸಿದ್ದರಾಮಯ್ಯ ಅವರು. ಕೇವಲ ಚುನಾವಣೆಗಾಗಿ ಬಿಜೆಪಿಯವರು ರಾಮ, ಆಂಜನೇಯನ ಹೆಸರು ಹೇಳುತ್ತಿದ್ದಾರೆ. ನಾನು‌ ಕೂಡ ಆಂಜನೇಯ ಭಕ್ತನೇ. ಪ್ರತಿ ವರ್ಷ ಮಾಲೆ ಧರಿಸುತ್ತೇನೆ ಎಂದು ಛೇಡಿಸಿದರು. 

ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದನ್ನು ಹೆಚ್ಚು ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ ಅಧಿಕಾರಕ್ಕೆ ಬರುವ ಮುನ್ನ ವಿದೇಶದಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ ಹದಿನೈದು ಲಕ್ಷ ಹಣ ಹಾಕುವುದಾಗಿ ಹೇಳಿದ ಮಹನೀಯರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: 2 ವರ್ಷಗಳಲ್ಲಿ ಬದಲಾಯ್ತು T20 ವಿಶ್ವಕಪ್ ತಂಡ! ಅಂದು ಮಿಂಚಿದ್ದ 7 ಆಟಗಾರರಿಗೆ ಇಲ್ಲ ಸ್ಥಾನ

ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ವೇಳೆ ನಮ್ಮ ಸರ್ಕಾರ ಬಡವರಿಗೆ ಉಚಿತವಾಗಿ ಏಳು ಕೆ.ಜಿ.ಅಕ್ಕಿ ನೀಡುತ್ತಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಐದು ಕೆ.ಜಿ.ಗೆ ಇಳಿಸಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಉಚಿತವಾಗಿ ಅಕ್ಕಿ ಕೊಡುವುದನ್ನು ಎರಡು ಕೆ.ಜಿ.ಗೆ ಇಳಿಸುತ್ತಿದ್ದರು ಎಂದು ಲೇವಡಿ ಮಾಡಿದರು. 

 ಇಂದು ನಮ್ಮ ಸರ್ಕಾರ ಉಚಿತವಾಗಿ ಹತ್ತು ಕೆ.ಜಿ.ಅಕ್ಕಿ ಕೊಡುತ್ತಿದೆ. ಹೆಚ್ಚುವರಿ ಅಕ್ಕಿ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದಾಗ ಇನ್ನಿಲ್ಲದ ಡ್ರಾಮಾ ಮಾಡಿದ್ರು.  ಆದರೆ ನಮ್ಮ ಮುಖ್ಯಮಂತ್ರಿಗಳು ನುಡಿದಂತೆ ನಡೆಯುತ್ತಿದ್ದು, ಜನರ ಖಾತೆಗೆ ಅಕ್ಕಿಯ ಹಣವನ್ನು ಖಾತೆಗೆ ಜಮೆ ಮಾಡಿಸುತ್ತಿದ್ದಾರೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ಎಸ್.ತಂಗಡಗಿ, ಭೈರತಿ ಸುರೇಶ್, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಎಚ್. ಆಂಜನೇಯ, ಕೊಪ್ಪಳ ಜಿಲ್ಲಾಧ್ಯಕ್ಷ  ಅಮರೇಗೌಡ ಬಯ್ಯಾಪುರ, ಮಾಜಿ ಶಾಸಕ ಎಚ್.ಆರ್ ಶ್ರೀನಿವಾಸ್ ಹಾಗೂ ಮುಖಂಡರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News