ಬೆಂಗಳೂರು: ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸಲಿದ್ದು ರಾಜ್ಯದ ದಕ್ಷಿಣ ತುಟ್ಟ ತುದಿ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಯಾತ್ರೆ ಆರಂಭವಾಗಲಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಜೆಪಿ ನಡ್ಡಾ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಹೌದು, ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಆಕ್ಟಿವ್ ಆಗಿರುವ ಬಿಜೆಪಿ ಇಂದಿನಿಂದ (ಮಾ.1) ವಿಜಯ ಸಂಕಲ್ಪ ಯಾತ್ರೆ ನಡೆಸಲು ಸಜ್ಜಾಗಿದೆ. ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದು ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರುಗಳು, ಸಂಸದರು ಸಾಥ್ ಕೊಡಲಿದ್ದಾರೆ.
ಇದನ್ನೂ ಓದಿ- ಇಂದಿನಿಂದ ಸರ್ಕಾರಿ ನೌಕರರ ಪ್ರೊಟೆಸ್ಟ್- ಜನಸಾಮಾನ್ಯರ ಮೇಲೆ ಡೈರೆಕ್ಟ್ ಎಫೆಕ್ಟ್
ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ, ಸೋಲಿಗರು ಹಾಗೂ ಬೇಡಗಂಪಣ ಜನಾಂಗದವರೊಂದಿವೆ ಸಂವಾದ ನಡೆಯಲಿದ್ದು ಅದಾದ ನಂತರ ಸಾಲೂರು ಮಠಕ್ಕೆ ಭೇಟಿ ಕೊಡಲಿದ್ದಾರೆ. ಮಧ್ಯಾಹ್ನ 2 ರ ವೇಳೆಗೆ ರಾಜ್ಯ ನಾಯಕರು ಹನೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿ ಬಳಿಕ ಕೊಳ್ಳೇಗಾಲದಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಮಾವೇಶ ನಡೆಯಲಿದೆ.
ಇದನ್ನೂ ಓದಿ- ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಗ್ಯಾಸ್ ಸಿಲಿಂಡರ್ ಮತ್ತೆ ದುಬಾರಿ
ಚಾಮರಾಜನಗರದಲ್ಲಿ ನಾಳೆ ಎಂದರೆ ಮಾರ್ಚ್ 2 ರಂದು ನಗರದ ಆದಿಶಕ್ತಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಯಲಿದ್ದು ಮಧ್ಯಾಹ್ನ ಗುಂಡ್ಲುಪೇಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯದಲ್ಲಿ 4 ತಂಡಗಳು ಯಾತ್ರೆ ನಡೆಸಲಿದ್ದು ಗಡಿಜಿಲ್ಲೆಯಲ್ಲೇ ಮೊದಲ ಯಾತ್ರೆ ನಡೆಯಲಿರುವುದು ವಿಶೇಷವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.