ಬೆಂಗಳೂರು: ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಬಿ.ಎಲ್.ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ ಬಿ.ಎಸ್.ಯಡಿಯೂರಪ್ಪರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಇತ್ತೀಚಿಗೆ ಬಿಜೆಪಿಯ ಶಾಸಕರು ಬಿ.ಎಸ್.ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪನವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್.ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ! ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ!’ವೆಂದು ಕಾಂಗ್ರೆಸ್ ಕುಟುಕಿದೆ.
ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ಬಿಜೆಪಿ ಶಾಸಕರೆಲ್ಲ @BSYBJP ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!
ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ…
— Karnataka Congress (@INCKarnataka) August 31, 2023
ಇದನ್ನೂ ಓದಿ: ನನಗೆ ನೋಟಿಸ್ ಕೊಟ್ಟಿದ್ದಾರೆ ಅದಕ್ಕೆ ನಾನು ಹೋಗಿಲ್ಲ
‘ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, 4 ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ.ಎಲ್.ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ,
ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ.ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು!@BSYBJP ಅವರಿಗೆ…
— Karnataka Congress (@INCKarnataka) August 31, 2023
‘ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ. ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ.ಎಲ್.ಸಂತೋಷ್ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಬಿಜೆಪಿಯಲ್ಲಿ ಮುಂದುವರೆದ ಅಧ್ಯಕ್ಷ ಆಯ್ಕೆ ವಿಚಾರ
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು.
ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ!
ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ @blsanthosh…
— Karnataka Congress (@INCKarnataka) August 31, 2023
ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು.@blsanthosh ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!
ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ…
— Karnataka Congress (@INCKarnataka) September 1, 2023
‘ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಬಿ.ಎಲ್.ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.