ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ರಾಜ್ಯ ಪ್ರವಾಸದ ಮೂಲಕ ಪಕ್ಷಕ್ಕೆ ಬಲ ತುಂಬುವ ಪ್ರಯತ್ನದಲ್ಲಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ.
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿ.ವೈ.ವಿಜಯೇಂದ್ರ, ಬೆಂಗಳೂರಿನ ಕಾಡುಗೋಡಿಯ ಬಳಿ ಬೆಸ್ಕಾಂನ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ಒಂದು ಕಡೆ ಉಚಿತ ಕರೆಂಟ್ ಕೊಡುತ್ತೇವೆಂದು, ಬೆನ್ನಲ್ಲೇ ಕರೆಂಟ್ ಬಿಲ್ ಕರೆಂಟ್ ಹೊಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವ್ಯಸ್ಥೆ ಹಳಿತಪ್ಪಿದೆ’ ಎಂದು ಟೀಕಿಸಿದ್ದಾರೆ.
ಒಂದು ಕಡೆ ಉಚಿತ ಕರೆಂಟ್ ಕೊಡುತ್ತೇವೆಂದು, ಬೆನ್ನಲ್ಲೇ ಕರೆಂಟ್ ಬಿಲ್ ಕರೆಂಟ್ ಹೊಡೆಸುತ್ತಿರುವ ಕಾಂಗ್ರೆಸ್ ಸರ್ಕಾರ, ಇದೀಗ ತನ್ನ ಹಳಿತಪ್ಪಿದ ಆಡಳಿತ ವ್ಯವ್ಯಸ್ಥೆಯ ಭಾಗವಾಗಿ ಅರಾಜಕತೆ ತಾಂಡವವಾಡುತ್ತಿರುವ ಇಂಧನ ಇಲಾಖೆಯ ಬೇಜವಾಬ್ದಾರಿಯಿಂದ
ರಸ್ತೆಗೆ ಬೀಳುತ್ತಿರುವ ವಿದ್ಯುತ್ ತಂತಿಗಳ ಮೂಲಕ, ನಿರ್ವಹಣೆ ಇಲ್ಲದ ಟ್ರಾನ್ಸ್ ಫಾರಂಗಳ ಮೂಲಕ…— Vijayendra Yediyurappa (@BYVijayendra) November 24, 2023
ಇದನ್ನೂ ಓದಿ: ಡಿಕೆಶಿ ವಿರುದ್ಧ CBI ತನಿಖೆ ವಾಪಸ್: ನಾಳೆ ಫ್ರೀಡಂಪಾರ್ಕ್ನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!
‘ಹಳಿತಪ್ಪಿದ ಆಡಳಿತ ವ್ಯವ್ಯಸ್ಥೆಯ ಭಾಗವಾಗಿ ಅರಾಜಕತೆ ತಾಂಡವವಾಡುತ್ತಿರುವ ಇಂಧನ ಇಲಾಖೆಯ ಬೇಜವಾಬ್ದಾರಿಯಿಂದ ರಸ್ತೆಗೆ ಬೀಳುತ್ತಿರುವ ವಿದ್ಯುತ್ ತಂತಿಗಳ ಮೂಲಕ, ನಿರ್ವಹಣೆ ಇಲ್ಲದ ಟ್ರಾನ್ಸ್ ಫಾರಂಗಳ ಮೂಲಕ ಅಮಾನುಷವಾಗಿ ಜನರ ಪ್ರಾಣಗಳನ್ನು ಬಲಿ ಪಡೆಯುತ್ತಿದೆ. ಮೊನ್ನೆ ಕಂಕುಳಲ್ಲಿದ್ದ ಹಸುಗೂಸು-ತಾಯಿ ಭಸ್ಮವಾದರೆ, ಇಂದು ಅಮಾಯಕ ರೈತ ರವಿಕುಮಾರ್ ಎಂಬುವವರು ದುರ್ಮರಣಕ್ಕೀಡಾಗಿದ್ದಾರೆ. ದಪ್ಪ ಚರ್ಮದ ಸರ್ಕಾರದ ವಿರುದ್ಧ ಜನರೇ ದಂಗೆ ಹೇಳುವ ಕಾಲ ದೂರವಿಲ್ಲ’ವೆಂದು ಎಚ್ಚರಿಕೆ ನೀಡಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಸೇಡಿನ ಭಾಗವಾಗಿ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕೇಸ್ ವಜಾಗೊಳಿಸುವಂತೆ @DKShivakumar ಅವರು ಮಾಡಿದ್ದ ಮನವಿಯನ್ನು ಘನ ಉಚ್ಚ ನ್ಯಾಯಾಲಯ ಈಗಾಗಲೇ ತಿರಸ್ಕರಿಸಿ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಆದಾಗ್ಯೂ ಕಾನೂನು ಸಚಿವ @HKPatilINC ಅವರು ತಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟ…
— Vijayendra Yediyurappa (@BYVijayendra) November 24, 2023
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿ.ವೈ.ವಿಜಯೇಂದ್ರ ಅವರು, ‘ಹಿಂದಿನ ಬಿಜೆಪಿ ಸರ್ಕಾರ ಸೇಡಿನ ಭಾಗವಾಗಿ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕೇಸ್ ವಜಾಗೊಳಿಸುವಂತೆ ಡಿ.ಕೆ.ಶಿವಕುಮಾರ್ ಅವರು ಮಾಡಿದ್ದ ಮನವಿಯನ್ನು ಘನ ಉಚ್ಚ ನ್ಯಾಯಾಲಯ ಈಗಾಗಲೇ ತಿರಸ್ಕರಿಸಿ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಆದಾಗ್ಯೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ತಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಪೋಷಣೆಯ ಕ್ರಮವನ್ನು ಸಮರ್ಥಿಸಲು ವ್ಯರ್ಥ ಪ್ರಯತ್ನ ನಡೆಸಿರುವುದು ಅವರ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ’ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: ಧಾರವಾಡದಲ್ಲಿ ಮೋದಿಜಿ ವಿರುದ್ಧ ವಾಗ್ದಾಳಿ ನಡೆಸಿದ ಸಂತೋಷ್ ಲಾಡ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ