“ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರವೇ ಸೂಜಿ ಚುಚ್ಚಿದೆ”

ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Dec 10, 2022, 04:17 PM IST
  • ಪ್ರಧಾನ ಮಂತ್ರಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ
  • ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ.
  • ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ
“ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರವೇ ಸೂಜಿ ಚುಚ್ಚಿದೆ” title=
file photo

ಬೆಂಗಳೂರು: ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಪರೀಕ್ಷೆಯಲ್ಲಿ ಫೇಲ್ ಆಗಲು YouTube Ads ಕಾರಣ..! 75 ಲಕ್ಷ ರೂ. ಪರಿಹಾರಕ್ಕೆ ಸುಪ್ರೀಂಗೆ ಮೊರೆ....!

ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯದ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಕಿಡಿ ಕಾರಿದರು

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: “ನಾನು 4 ಮಕ್ಕಳಿಗೆ ಜನ್ಮ ನೀಡಲು ಕಾಂಗ್ರೆಸ್ ಪಕ್ಷವೇ ಕಾರಣ”

ಪ್ರಧಾನ ಮಂತ್ರಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ"ಎಂದು ಅವರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News