ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ: ಸಿಎಂ ಬೊಮ್ಮಾಯಿ

ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

Written by - Prashobh Devanahalli | Edited by - Zee Kannada News Desk | Last Updated : Feb 10, 2022, 05:39 PM IST
  • ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ
  • ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋ
  • ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ
ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ: ಸಿಎಂ ಬೊಮ್ಮಾಯಿ  title=
ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ (Dress Code) ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ.

ಇದನ್ನೂ ಓದಿ:  "ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು": ಮಲಾಲಾ ಯೂಸುಫ್‌ಜಾಯ್

ಈ ವಿಚಾರ ಮುಖ್ಯನ್ಯಾಯಮೂರ್ತಿಗಳ  ನೇತೃತ್ವದ ತ್ರಿಸದಸ್ಯ ಪೀಠಕ್ಕೆ (Three member Bench) ವರ್ಗಾವಣೆಯಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ  ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೊರಗಿನವರು ಪ್ರಚೋದನೆ ನೀಡಿದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆದುಕೊಳ್ಳುವುದು ಎಲ್ಲಾ ಸಂಘಟನೆಗಳ ಕರ್ತವ್ಯ ಎಂದರು.  

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು.  ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ  ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:  ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷಾ ಶುಲ್ಕ ಪಾವತಿ: ಫೆ.21ರವರೆಗೆ ಅವಧಿ ವಿಸ್ತರಣೆ

ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News