ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಸಿಎಂ ಭೇಟಿ ಮಾಡಿದ ಚೀನಾ ನಿಯೋಗ

ಚೀನಾ ನಿಯೋಗವು ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಬಗ್ಗೆ ಚರ್ಚೆ ನಡೆಸಿತು.

Last Updated : Jul 10, 2018, 06:37 PM IST
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಸಿಎಂ ಭೇಟಿ ಮಾಡಿದ ಚೀನಾ ನಿಯೋಗ title=

ಬೆಂಗಳೂರು: ಚೀನಾದ ಕಮ್ಯುನಿಸ್ಟ್ ಪಕ್ಷದ ಸ್ಥಾಯಿ ಸಮಿತಿ ಸದಸ್ಯರಾದ ಮು ಡಿಗಾಯ್ ನೇತೃತ್ವದ ನಿಯೋಗವು ಮಂಗಳವಾರ ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಬಗ್ಗೆ ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ದೇಶದ ಪ್ರಮುಖ ವ್ಯವಸ್ಥೆಗಳುಳ್ಳ ರಾಜ್ಯಗಳಲ್ಲಿ ಕರ್ನಾಟಕ ಸಹ ಒಂದು. ಅಲ್ಲದೆ, ವಿಶ್ವದಲ್ಲಿ ಸ್ಟಾರ್ಟ್ ಅಪ್'ಗಳನ್ನು ಆರಂಭಿಸಲು ಇರುವ ಉತ್ತಮ ಸ್ಥಳಗಳಲ್ಲಿ ಕರ್ನಾಟಕ ಎರಡನೇ ಅತ್ಯುತ್ತಮ ರಾಜ್ಯ ಎನಿಸಿಕೊಂಡಿದೆ. ಹೀಗಾಗಿ ಚೀನಾ ಬಂಡವಾಳ ಹೂಡಲು ಅಗತ್ಯವಾದ ಎಲ್ಲಾ ಗುಣಗಳನ್ನು ರಾಜ್ಯ ಹೊಂದಿದ್ದು, ಚೀನಾ ಹೂಡಿಕೆಗಳಿಗೆ ಪ್ರೋತ್ಸಾಹ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು. 

ರಾಜ್ಯವನ್ನು ವಿಶ್ವಮಟ್ಟದಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸಲು ಪಣತೊಟ್ಟಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಆರ್ಥಿಕತೆ, ಐಟಿ, ಸಂಸ್ಕೃತಿ, ಪ್ರವಾಸೋದ್ಯಮ ಸೇರಿದಂತೆ ಇತರ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
 

Trending News