ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳಿಂಗ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹೀಗಿದ್ದೂ ನೀವು ಏನ್ ಮಾಡ್ತಾ ಇದ್ದೀರಿ ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.
ಕೋಲಾರದ ನರಸಾಪುರದಲ್ಲಿ ತಲೆ ಎತ್ತಿದ್ದ 'ದೇಶದ ಮೊದಲ iPhone ಕಂಪನಿ' ಧ್ವಂಸ!
ಸಾರಿಗೆ ನೌಕರರ ಪ್ರತಿಭಟನೆ ಹಿನ್ನಲೆಯಲ್ಲಿ ತಮ್ಮ ನಿವಾಸಕ್ಕೆ ಕರೆಸಿಕೊಂಡ ಅವರು, ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆ(Protest) ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಇಂತಹ ನೌಕರರೊಂದಿಗೆ ಮಾತುಕತೆ ನಡೆಸಿ, ಮುಷ್ಕರ ಕೈಬಿಡುವತ್ತ ಕ್ರಮ ಕೈಗೊಳ್ಳುವ ಬದಲು, ನೀವ್ ಏನ್ ಮಾಡ್ತಾ ಇದ್ದೀರಿ ಎಂಬುದಾಗಿ ಗರಂ ಆಗಿ ಹೇಳಿದ್ದಾರೆ. ಅಲ್ಲದೇ ಶೀಘ್ರವೇ ಮುಷ್ಕರ ನಿರತರೊಂದಿಗೆ ಮಾತಕತೆ ನಡೆಸಿ, ಸರಿ ಪಡಿಸುವಂತೆಯೂ ಸೂಚಿಸಿದ್ದಾರೆ.
KSRTC-BMTC: 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪ್ರಯಾಣಿಕರ ಪರದಾಟ