ಹಾವೇರಿ: ಯಾವುದೂ ಶಾಶ್ವತವಲ್ಲ, ಈ ಬದುಕು ಕೂಡ ಶಾಶ್ವತವಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿ ನಾನು ಎಷ್ಟು ದಿನ ಇರ್ತೀನೋ ಗೊತ್ತಿಲ್ಲವೆಂದು ಬಸವರಾಜ್ ಬೊಮ್ಮಾಯಿ(Basavaraj Bommai) ಭಾವುಕವಾಗಿ ಹೇಳಿದ್ದಾರೆ. ಶಿಗ್ಗಾಂವಿ(Shiggavi)ಯಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಭಾವುಕರಾಗಿ ಮಾತನಾಡಿರುವ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ರಾ ಅನ್ನೋ ಪ್ರಶ್ನೆಯನ್ನು ಹುಟ್ಟುಹಾಕಿದ್ದಾರೆ.
‘ಇದು ಸಾಧು-ಸಂತರ ನಾಡು. ವೈಚಾರಿಕ ಕ್ರಾಂತಿ ಮಾಡಿದ ಗುರುಗಳಿದ್ದಾರೆ. ಕನಕದಾಸರು, ಸಂತ ಶಿಶುನಾಳ ಷರೀಫರು(Shishunala Sharif) ಇದ್ದಂತಹ ಊರಿದು. ಇಲ್ಲಿ ಯಾವುದೂ ಶಾಶ್ವತವಲ್ಲ, ಈ ಬದುಕು ಕೂಡ ಶಾಶ್ವತವಲ್ಲ. ನಾವು ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ, ಸ್ಥಾನಮಾನಗಳು ಯಾವವೂ ಶಾಶ್ವತವಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಈ ರಾಜ್ಯದ ಸಿಎಂ ಆಗಿದ್ದೇನೆ. ಶಿಗ್ಗಾಂವಿ ಕ್ಷೇತ್ರದ ಹೊರಗೆ ಇದ್ದಾಗ ಮಾತ್ರ ನಾನು ಸಿಎಂ, ಗೃಹ ಸಚಿವ. ಕ್ಷೇತ್ರಕ್ಕೆ ಬಂದಾಗ ನಿಮ್ಮ ಬಸವರಾಜ ಬೊಮ್ಮಾಯಿ ಆಗಿರುವೆ’ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ: ಎಚ್ಡಿಕೆ
‘ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ, ನವಣೆ ಅಕ್ಕಿಯ ಅನ್ನ ನೀಡಿದ್ದೀರಿ. ನಾನು ಯಾವುದೇ ಕೆಲಸ ಮಾಡಿದರೂ ಆ ಋಣ ತೀರಿಸಲು ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ ಅನ್ನೋದು ಶಾಶ್ವತ. ಅದರ ಹಿಂದಿರುವ ಪದನಾಮಗಳು ಶಾಶ್ವತವಲ್ಲ. ನಿಮ್ಮ ಪ್ರೀತಿ-ವಿಶ್ವಾಸವನ್ನು ಶಾಶ್ವತವಾಗಿ ಉಳಿಸಿಕೊಂಡು ಹೋಗುವೆ. ಎಲ್ಲ ಸಮುದಾಯಗಳ ಭಾವನೆಗೆ ಸ್ಪಂದಿಸುವುದು ನನ್ನ ಜವಾಬ್ದಾರಿ’ ಅಂತಾ ಹೇಳಿದ್ದಾರೆ.
‘ಒಂದು ರಾಜ್ಯ ಪಡೆಯಲು, ವಿಸ್ತರಣೆ ಮಾಡಲು ಕಿತ್ತೂರು ಚೆನ್ನಮ್ಮ(Kittur Chennamma) ಹೋರಾಡಿರಲಿಲ್ಲ. ತನ್ನ ರಾಜ್ಯದ ಜನರ ರಕ್ಷಣೆ, ಸ್ವಾಭಿಮಾನಕ್ಕಾಗಿ ಹೋರಾಟ ಮಾಡಿದ್ದಳು. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದ ಚೆನ್ನಮ್ಮ ಎಲ್ಲ ಸಮುದಾಯದವರನ್ನು ಸೇರಿಸಿ ರಾಜ್ಯ ಉಳಿಸುವ ಕೆಲಸ ಮಾಡಿದ್ದರು. ಸಂಗೊಳ್ಳಿ ರಾಯಣ್ಣ ಸೆರೆಯಾದಾಗ ಚೆನ್ನಮ್ಮ ಕುಸಿದುಹೋಗಿದ್ದರು. ಅಲ್ಲಿಯವರೆಗೆ ಚೆನ್ನಮ್ಮ ಬ್ರಿಟಿಷರ ಮುಂದೆ ಕುಸಿದಿರಲಿಲ್ಲ. ಸಾಧಕರಿಗೆ ಸಾವು ಅಂತ್ಯವಲ್ಲ’ವೆಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ: ನಟಿ ಹರಿಪ್ರಿಯಾ
ಬೊಮ್ಮಾಯಿಯವರು ತಂದೆಯಂತೆ ಕೇಂದ್ರದಲ್ಲಿ ಮಂತ್ರಿಯಾಗ್ತಾರೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅವರ ತಂದೆಯಂತೆ ಕೇಂದ್ರದಲ್ಲಿ ಮಂತ್ರಿಯಾಗ್ತಾರೆ ಎಂದು ಹಿರಿಯ ಸಚಿವ ಮುರುಗೇಶ್ ನಿರಾಣಿ(Murugesh Nirani) ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಅವರು, ‘ಯಾರು ಏನೇ ಹೇಳಲಿ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎನ್ನುವ ಮೂಲಕ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.