ಇನ್ನು ಮುಂದೆ ಶನಿವಾರ ಮಾತ್ರ ಸಿಎಂ ಕುಮಾರಸ್ವಾಮಿ ಜನತಾ ದರ್ಶನ

ಈ ಭೇಟಿಯ ಸಂದರ್ಭದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಅಹವಾಲುಗಳಿಗೆ ಅವಕಾಶವಿರುವುದಿಲ್ಲ. ಸೇರಿದಂತೆ ಖಾಸಗಿ ಅಹವಾಲುಗಳಿಗೆ ಅವಕಾಶವಿರುವುದಿಲ್ಲ. 

Last Updated : Aug 28, 2018, 07:47 AM IST
ಇನ್ನು ಮುಂದೆ ಶನಿವಾರ ಮಾತ್ರ ಸಿಎಂ ಕುಮಾರಸ್ವಾಮಿ ಜನತಾ ದರ್ಶನ title=

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು  ಬೆಂಗಳೂರಿನಲ್ಲಿರುವ ಸಂದರ್ಭಗಳಲ್ಲಿ ಇನ್ನು ಮುಂದೆ ಪ್ರತಿ ಶನಿವಾರ ಮಾತ್ರ ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 4.30 ರವರೆಗೆ  ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ  ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ಅಹವಾಲುಗಳಿಗೆ ಅವಕಾಶವಿರುವುದಿಲ್ಲ. ಸೇರಿದಂತೆ ಖಾಸಗಿ ಅಹವಾಲುಗಳಿಗೆ ಅವಕಾಶವಿರುವುದಿಲ್ಲ. 

ವೈದ್ಯಕೀಯ ಪರಿಹಾರ ನಿಧಿಗೆ ಕೋರಿಕೆ ಸಲ್ಲಿಸುವವರು ಆಧಾರ್ ಕಾರ್ಡು ಅಥವಾ ಬಿಪಿಎಲ್ ಕಾರ್ಡು, ಆಸ್ಪತ್ರೆಯ ಬಿಲ್ಲುಗಳು ಮತ್ತು ಚಿಕಿತ್ಸೆಯ ವಿವರಗಳ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. 

ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾತ್ರ ಸಾರ್ವಜನಿಕರು ಲಿಖಿತ ಮನವಿಗಳನ್ನು ಸಲ್ಲಿಸುವುದು. ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ತೆಗೆದುಕೊಳ್ಳಲಾದ ಕ್ರಮಗಳನ್ನು ಮೊಬೈಲ್ ಎಸ್.ಎಂ.ಎಸ್ ಮೂಲಕ ಮಾಹಿತಿ ಒದಗಿಸಲಾಗುವುದು.

ಅನಿಯಮಿಯತವಾಗಿ ಸಾರ್ವಜನಿಕರು ಮುಖ್ಯಮಂತ್ರಿ ಯವರ ಜೆ.ಪಿ.ನಗರದ ನಿವಾಸ, ಗೃಹ ಕಚೇರಿ ಕೃಷ್ಣಾ ಹಾಗೂ ವಿಧಾನಸೌಧಕ್ಕೆ ಭೇಟಿ ನೀಡುತ್ತಿರುವುದರಿಂದ ಮುಖ್ಯಮಂತ್ರಿಗಳ ಕೆಲಸ ಕಾರ್ಯಗಳಿಗೆ  ಹಾಗೂ ನಿಗದಿತ  ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಸಕಾಲಕ್ಕೆ ಭಾಗವಹಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಸಾರ್ವಜನಿಕ ಭೇಟಿಗೆ ಸಮಯವನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿರುವ ಪತ್ರದಲ್ಲಿ ತಿಳಿಸಲಾಗಿದೆ.
 

Trending News