Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ.
ಗೃಹಲಕ್ಷ್ಮೀ ಯೋಜನೆ ಬಗ್ಗೆ ಈಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಷ್ಟು ಮಾತ್ರವಲ್ಲ ವಿದೇಶಗಳಲ್ಲೂ ಕೂಡ ವ್ಯಾಪಕವಾದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಈ ಯೋಜನೆ ನಿಜಕ್ಕೂ ಅರ್ಹರಿಗೆ ಸಿಗಬೇಕು ಎನ್ನುವುದು ಸರ್ಕಾರದ ನಿಲುವು ಇದೇ ದೃಷ್ಟಿಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ಯೋಜನೆಯಿಂದ ಕೈಬಿಡುವ ಕೆಲಸ ಶುರುವಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ- Gruha Lakshmi Scheme: ಎರಡು ತಿಂಗಳಿನಿಂದ 'ಗೃಹಲಕ್ಷ್ಮಿ' ಹಣಕ್ಕಾಗಿ ಕಾದಿದ್ದವರಿಗೆ ಗುಡ್ನ್ಯೂಸ್
ಮೊದಲನೆಯದಾಗಿ ಸರ್ಕಾರ ಅಕ್ರಮವಾಗಿ ರೇಷನ್ ಕಾರ್ಡ್ (Ration Card) ಪಡೆದಿರುವವರನ್ನು ಗುರುತಿಸುತ್ತಿದೆ. ಶೀಘ್ರವೇ ಅಂಥ ಅಕ್ರಮ ಪಡಿತರ ಚೀಟಿಯನ್ನು ರದ್ದು ಮಾಡಲಾಗುತ್ತದೆ. ಆಗ ಅವರಿಗೆ ಅನ್ನಭಾಗ್ಯ ಯೋಜನೆಯ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತಿರುವುದು ನಿಲ್ಲುತ್ತದೆ. ಜೊತೆಗೆ ಬಿಪಿಎಲ್ ಕಾರ್ಡ್ ಇಲ್ಲದವರನ್ನು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅನರ್ಹರು ಎಂದು ನಿರ್ಧರಿಸಲಾಗುತ್ತದೆ.
ಅನರ್ಹರ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿ:
ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.karnataka.gov.in/Home/EServices ಗೆ ಹೋಗಿ. ನಂತರ ಅಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆಯಲ್ಲಿನ Show Cancelled/suspend list ಮೇಲೆ ಕ್ಲಿಕ್ ಮಾಡಿ. ಅದಾದ ಮೇಲೆ ನಿಮ್ಮ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಿ. ಆಗ ನೀವು ಅನರ್ಹಗೊಂಡಿರುವ ಪಡಿತರ ಚೀಟಿದಾರ ಪಟ್ಟಿಯನ್ನು ನೋಡಬಹುದು. ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಅನ್ನು ಯಾವ ಕಾರಣಕ್ಕೆ ರದ್ದು ಮಾಡಲಾಗಿದೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗಿರುತ್ತದೆ.
ಇದನ್ನೂ ಓದಿ- Indian Railways Rules: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್, 50% ಆಫರ್‌ನಲ್ಲಿ ಟ್ರೈನ್ ಟಿಕೆಟ್ ಬುಕ್ ಮಾಡಿ..!
ಗುಡ್ ನ್ಯೂಸ್ ಏನಪ್ಪಾ ಅಂದರೆ…
ಇಲ್ಲಿಯವರೆಗೆ ಹೇಳಿದ್ದು ಕೆಲವರಿಗೆ (ಅಪಾತ್ರರರಿಗೆ) ಗೃಹಲಕ್ಷ್ಮೀ ಯೋಜನೆಯ ಹಣ ನಿಂತುಹೋಗುತ್ತದೆ ಎನ್ನುವ ಬ್ಯಾಡ್ ನ್ಯೂಸ್. ಆದರೆ ಮುಂದಿನದು ಗುಡ್ ನ್ಯೂಸ್. ಇಂದಿನಿಂದ (15/02/2025) ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಪಾವತಿಸುವ ಕಾರ್ಯ ಶುರುವಾಗಿದೆ. ಕೆಲ ಜಿಲ್ಲೆಗಳಲ್ಲಿ ಮೂರು ತಿಂಗಳಿಂದ ಹಣ ಹಾಕಿಲ್ಲ. ಅವುಗಳನ್ನು ಮೊದಲು ಪಾವತಿಸಲಾಗುತ್ತದೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿವೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.