ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಹೊರೆಯನ್ನು ನಾವು ಯಾರ ಮೇಲೆಯೂ ಹಾಕುತ್ತಿಲ್ಲ, ಈ ವಿಚಾರವಾಗಿ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ. ಇದೆ ವೇಳೆ ಸಿಎಂ ಹಿಂದಿನ ಸರ್ಕಾರದಲ್ಲಿ ಆಗಿರುವ ಲೋಪವನ್ನು ಮನವರಿಕೆ ಮಾಡಿದರು.
ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ
ಈ ಕುರಿತಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ.ಕೆ.ಇ.ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ಅವರು ತಿಳಿಸಿದರು.ಇದೇ ವೇಳೆ ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್.ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು ಇಳಿಸಬೇಕು.ಇಂಧನ ಶುಲ್ಕ (Fuel Escalation charges) ನಲ್ಲಿ ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ.ಎಸ್.ಎಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: 5 ವರ್ಷದಲ್ಲಿ 25 ಕೋಟಿ ಸಸಿ ನೆಡುವ ಸಂಕಲ್ಪ: ಸಚಿವ ಈಶ್ವರ ಖಂಡ್ರೆ
ಇದೇ ವೇಳೆ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಎಫ್.ಕೆ.ಸಿ.ಸಿ.ಐ ಪದಾಧಿಕಾರಿಗಳಾದ ರಮೇಶ್ ಚಂದ್ರ ಲಾಹೋಟಿ, ಎಂ.ಜಿ.ಬಾಲಕೃಷ್ಣ ಡಾ: ಪ್ರಸಾದ್, ಬಿ.ಟಿ. ಮನೋಹರ್ ಅವರುಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.