ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದ್ದಾರೆ. KMF ವತಿಯಿಂದ 1 ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀಟರ್ ಇತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಲಿನ ಸೊಸೈಟಿಗಳು ರೈತರ ಸಂಘಟನೆ ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಅವರು, ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.
ಇದನ್ನೂ ಓದಿ: Daily GK Quiz: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ?
ರೈತರಿಗೆ ನೆರವು
ರಾಜ್ಯದಲ್ಲಿ ಸುಮಾರು 16,000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ನಲ್ಲಿ 50ML ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂ. ಹೆಚ್ಚಿಸಲಾಗಿದೆ ಎಂದರು.
ವಿಪಕ್ಷದ ಅಪಪ್ರಚಾರ
ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ನೋಡಿದ್ರೆ ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲವೆಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. 1 ಕೋಟಿ ಲೀಟರ್ ಉತ್ಪಾದನೆಯಾದರೆ 1 ದಿನಕ್ಕೆ 5 ಕೋಟಿ ರೂ. ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. 1 ತಿಂಗಳಿಗೆ 150 ಕೋಟಿ, ವರ್ಷಕ್ಕೆ 1,800 ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ. 2 ರೂ. ಇದ್ದ ಪ್ರೋತ್ಸಾಹ ಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆಂದು ಕಿಡಿಕಾರಿದರು.
ಇದನ್ನೂ ಓದಿ: Good News: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ
ಕೆಎಂಎಫ್ ಮೊಟ್ಟ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ ನಾಡಿನ ಹೈನುಗಾರಿಕೆಯಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದೆ. ಈ ಐತಿಹಾಸಿಕ ಸಾಧನೆಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಪೂಜೆ ಸಲ್ಲಿಸಿ, ಸಾಧನೆಯ ಹಿಂದಿನ ಶಕ್ತಿಯಾಗಿರುವ ನಾಡಿನ ರೈತಾಪಿ ವರ್ಗಕ್ಕೆ ಧನ್ಯವಾದ ಸಲ್ಲಿಸಿದೆ.#ನಂದಿನಿಹಾಲು #NandiniMilk #KMF pic.twitter.com/qNBq2GT3EK
— Siddaramaiah (@siddaramaiah) July 2, 2024
ಹಾಲಿನ ದರ ಹೆಚ್ಚಳವಾಗಿಲ್ಲ
ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲವೆಂದು ಪುನರುಚ್ಚರಿಸಿದ ಸಿಎಂ ಸಿದ್ದರಾಮಯ್ಯನವರು, ಗ್ರಾಹಕರಿಗೆ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.