ಮೈಸೂರು : ಮೂಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದೆ . ಸರ್ಕಾರ ನೀಡಿರುವ ಉತ್ತರವನ್ನು ರಾಜಪಾಲರು ಒಪ್ಪಿಕೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
ಮೂಡಾ ಸೈಟ್ ಹಂಚಿಕೆ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ.ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ.ಎಲ್ಲವೂ ಕಾನೂನು ಪ್ರಕಾರವಾಗಿಯೇ ನಡೆದಿದೆ.ಬಿಜೆಪಿ ಸರ್ಕಾರದ ಅವಧಿ ಅಂದರೆ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ : ಹಳ್ಳ ಹಿಡಿದ ಸಿಎಂ ಸಿದ್ದರಾಮಯ್ಯರ ಕನಸಿನ ಇಂದಿರಾ ಕ್ಯಾಂಟೀನ್ ಯೋಜನೆ!
2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೂಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ.ಆಪರೇಶನ್ ಕಮಲ ನಡೆಸಲು ಪ್ರಯತ್ನಿಸಿದರೂ,ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಹೀಗೆಲ್ಲಾ ಮಾಡುತ್ತಿದ್ದಾರೆ.ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದೆ.ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಇದೀಗ ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ!
ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು.ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ.ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ,ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು.ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದು ವಿರೋಧ ಲಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ :
ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್ ಹಾಕಿಸಿಕೊಂಡಿರುವ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ : ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ!
ಸತ್ಯಕ್ಕೇ ಅಂತಿಮ ಜಯ :
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು.ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ.ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಆ ಸುಳ್ಳನ್ನೇ ಸತ್ಯ ಎಂದು ನಂಬಿಸಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ