ಬೆಂಗಳೂರು : ಮುಡಾದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಪಡೆದು ಕೊಂಡಿದ್ದಾರೆಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ಆರೋಪಿಸಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಪಕ್ಷ ನಾಯಕರ ಚೆರ್ಚೆ ಮೇಲೆ ಉತ್ತರ ನೀಡುವಾಗ ದೇವೇಗೌಡರ ಕುಟುಂಬ ಸದಸ್ಯರು ಮುಡಾದಿಂದ 48 ನಿವೇಶನ ಪರಿಹಾರವಾಗಿ ಪಡೆದಿದ್ದಾರೆ ಎಂದು 2011ರಲ್ಲಿ ಸಭಾಪತಿ ಡಿ.ಎಚ್.ಶಂಕರ ಮೂರ್ತಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, 2011ರಲ್ಲಿ ಮೂಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ಬಿಜೆಪಿಯಿಂದ ಜೆಡಿಎಸ್ ಮೇಲೆ ಗುರುತರ ಆರೋಪ ಇದೆ. ಮೈಸೂರಿನ ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ 17-03-2011 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ: ಬೊಮ್ಮಾಯಿ, ಶ್ರೀರಾಮುಲು ಮೇಲೂ ತನಿಖೆ ನಡೆಸಲು ಒತ್ತಾಯ
ಈ ಆರೋಪದಲ್ಲಿ ಹೆಚ್.ಡಿ.ಕುಮಾರಸ್ವಾಮಿರವರಿಗೆ 300x 200 ಚ.ಅಡಿ ಅಳತೆಯ (ಸುಮಾರು 60,000 ಚ.ಅಡಿ) ನಿವೇಶನ ಸಂಖ್ಯೆ17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ ಕೋಂ ಬೀರೇಗೌಡ ಎಂಬುವರಿಗೆ 130x110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ ಕುರಿತು ಆರೋಪ ಮಾಡಿದ್ದಾರೆ. ಇದರ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರಿಗೆ ಅಂದಿನ ಬಿಜೆಪಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸದನದಲ್ಲಿ ಮುಡಾ ಅಕ್ರಮ ನಿವೇಶನ ಹಂಚಿಕೆ ಕುರಿತು ದೇವೇಗೌಡರ ಕುಟುಂಬದ ಮೇಲೆ ಮಾಡಿರುವ ಗಂಭೀರ ಆರೋಪದ ಮೇಲೆ ತನಿಖೆಗೆ ಒತ್ತಾಯಿಸಲು ತಾಕತ್ತು ಇದೆಯೇ? ಯಡಿಯೂರಪ್ಪನವರು ದಾಖಲೆಗಳನ್ನು ಸಭಾಪತಿಗಳಿಗೆ ಮಂಡಿಸಿದರು ಇಲ್ಲಿಯವರೆಗೆ ಬಿಜೆಪಿ ಯಾವ ಕಾರಣಕ್ಕೆ ಮೌನವಾಯಿತು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:"ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಸರ್ಕಾರದ ಹಗರಣ ಬಯಲು ಮಾಡುವುದು ಅನಿವಾರ್ಯ"
ಅವಕಾಶವಾದದ ರಾಜಕಾರಣ ಮತ್ತು ಅನುಕೂಲ ಸಿಂಧು ರಾಜಕಾರಣಕ್ಕೆ ಶರಣಾಗಿರುವ ಬಿಜೆಪಿ ಮುಡಾ ಹಗರಣದಲ್ಲಿ ಯಾವ ಯಾವ ಬಿಜೆಪಿ ನಾಯಕರು ಎಷ್ಟು ಎಷ್ಟು ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮೈಸೂರಿನ ಮುಡಾದಲ್ಲಿ ಹೆಚ್ಚು ಹಗರಣಗಳು ನಡೆದಿರುತ್ತವೆ ಎಂದು ವಾಗ್ದಾಳಿ ನಡೆಸಿದರು.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವುದನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದೆ. ಆದರೆ ಯಾವುದೇ ಭೂಮಿಯನ್ನು ಕಳೆದುಕೊಳ್ಳದೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುವುದಿಲ್ಲ. ಅದೇ ರೀತಿ ಒಬ್ಬನೇ ವ್ಯಕ್ತಿಗೆ ಯಾವ ಆಧಾರದ ಮೇಲೆ 60 ಸಾವಿರ ಅಡಿ ಅಳತೆಯ ನಿವೇಶನ ಮಂಜೂರಾಗಿತ್ತು?. ಸದನದ ಒಳಗೆ ದಾಖಲೆಯಿಟ್ಟು ಮಾತನಾಡಿದ ಯಡಿಯೂರಪ್ಪನವರಿಗೆ ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.