ಬೆಂಗಳೂರು: ಪ್ರಧಾನಿ ಮೋದಿಯವರು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿದ ಬಳಿಕ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ರಾಜ್ಯ ಬಿಜೆಪಿ ನಾಯಕರನ್ನು ತಮ್ಮ ಹತ್ತಿರಕ್ಕೂ ಬಿಟ್ಟುಕೊಂಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವ ಮುನಿರತ್ನ ಸೇರಿದಂತೆ ಇನ್ನುಳಿದ ಬಿಜೆಪಿ ನಾಯಕರು ಜನಸಮಾನ್ಯರಂತೆ ರಸ್ತೆ ಬದಿ ನಿಂತು ಪ್ರಧಾನಿ ಮೋದಿಯವರಿಗೆ ಕೈಬಿಸಿದ್ದಾರೆ.
ಈ ಫೋಟೋವನ್ನು ಹಂಚಿಕೊಂಡು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಬಂದಿರುವ ದುಸ್ಥಿತಿ ಬಗ್ಗೆ ವ್ಯಂಗ್ಯವಾಡಿದೆ. ‘ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಪ್ರಧಾನಿ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?’ ಎಂದು ಪ್ರಶ್ನಿಸಿದೆ.
'@BJP4Karnataka ನಾಯಕರದ್ದು ಎಂತಹಾ ದುಸ್ಥಿತಿ..
ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ!
ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ!
ಛೇ, ಮಿನಿಮಮ್ ಮರ್ಯಾದೆಯೂ… pic.twitter.com/QOZ3k8ZiXQ
— Karnataka Congress (@INCKarnataka) August 26, 2023
ಇದನ್ನೂ ಓದಿ: ಮಧುರೈನಲ್ಲಿ ಸ್ಟೇಷನರಿ ಕೋಚ್ನಲ್ಲಿ ಕಾಣಿಸಿಕೊಂಡ ಬೆಂಕಿ
‘ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಪ್ರಧಾನಿ ಮೋದಿಯವರ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ’ ಎಂದು ಮೋದಿ ರೋಡ್ ಶೋವನ್ನು ವೀಕ್ಷಿಸಲು ಜನರೊಂದಿಗೆ ಬಿಜೆಪಿ ನಾಯಕರು ರಸ್ತೆ ಬದಿ ನಿಂತಿರುವ ಫೋಟೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ.
ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ.
ಮೋದಿಯ ಕೋಪ ತಣ್ಣಗಾಗುವವರೆಗೆ
ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ!ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ!@BJP4Karnataka ಅಬ್ಬೇಪಾರಿಯಾಗಿದೆ… pic.twitter.com/Gz2tJL2B7O
— Karnataka Congress (@INCKarnataka) August 26, 2023
‘ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವರುಗಳು, ಹಾಲಿ ಶಾಸಕರುಗಳು ಹೀಗೆ ಬೀದಿಪಾಲಾಗಿದ್ದಾರೆ ಎಂದರೆ "ಸರ್ವಾಧಿಕಾರಿ"ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ? ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿಯ
ರಾಜ್ಯಾಧ್ಯಕ್ಷ,
ಮಾಜಿ ಸಚಿವರುಗಳು,
ಹಾಲಿ ಶಾಸಕರುಗಳು,
ಹೀಗೆ ಬೀದಿಪಾಲಾಗಿದ್ದಾರೆ ಎಂದರೆ "ಸರ್ವಾಧಿಕಾರಿ"ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ?ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ @BJP4Karnataka ? pic.twitter.com/xYcUcxBhJK
— Karnataka Congress (@INCKarnataka) August 26, 2023
ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಸಂತಸ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.