ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಾ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಈಗ ಪಕ್ಷದ ಸಂಘಟನೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡುವತ್ತ ಹೆಜ್ಜೆ ಇಟ್ಟಿದೆ.
ಅದರ ಭಾಗವಾಗಿ ಈಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ದಿನೇಶ್ ಗುಂಡುರಾವ್ ಹೆಗಲಿಗೆ ನೀಡುವತ್ತ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಮುಂದಿನ ಚುನಾವಣೆಯ ದೃಷ್ಟಿಯಿಂದ ಗುಂಡುರಾವ್ ಅವರೇ ಸೂಕ್ತ ವ್ಯಕ್ತಿ ಎಂದು ಹೈಕಮಾಂಡ್ ಅಭಿಪ್ರಾಯಪಟ್ಟಿದೆ.
ನಿನ್ನೆ ಇದೇ ವಿಚಾರವನ್ನು ಚರ್ಚೆ ಮಾಡಲು ದಿನೇಶ್ ಗುಂಡೂರಾವ್, ಎಂ.ಬಿ ಪಾಟೀಲ್, ಕೃಷ್ಣ ಬೈರೇಗೌಡ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿತ್ತು. ಈಗ ಇವರೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನಕ್ಕೆ ಬಂದಿರುವ ಹೈಕಮಾಂಡ್, ದಿನೇಶ್ ಗುಂಡುರಾವ್ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲಿದೆ ಎಂದು ತಿಳಿದು ಬಂದಿದೆ.
ದಿನೇಶ್ ಗುಂಡುರಾವ್ ಅವರು ಪರಮೇಶ್ವರ್, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಬಣಗಳ ನಡುವೆ ಸಮಾಂತರ ಅಂತರ ಕಾಯ್ದುಕೊಂಡಿರುವುದರಿಂದ ಹೈಕಮಾಂಡ್ ಅವರಿಗೆ ಮಣೆ ಹಾಕಲಿದೆ ಎನ್ನಲಾಗುತ್ತಿದೆ.ಆದರೆ ಅಧ್ಯಕ್ಷ ಹುದ್ದೆಯ ಹೆಸರನ್ನು ಅಧಿಕೃತವಾಗಿ ಈ ತಿಂಗಳ 14 ರ ಬಳಿಕ ಪ್ರಕಟಿಸಲಿದೆ ಎನ್ನಲಾಗಿದೆ.