ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಹನೂರು ತಾಲೂಕಿನ ಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಪ್ರಯುಕ್ತ ಇಂದು ಹಾಲರವಿ ಉತ್ಸವ ಸಂಭ್ರಮ, ಸಡಗರದಿಂದ ಬೇಡಗಂಪಣ ವಿಧಿ ವಿಧಾನದಲ್ಲಿ ಸಂಪ್ರದಾಯ ಬದ್ಧವಾಗಿ ನೆರವೇರಿತು.
ಪ್ರತಿ ವರ್ಷ ದೀಪಾವಳಿ ಜಾತ್ರೆಯ ಸಮಯದಲ್ಲಿ ಅಮಾವಾಸ್ಯೆ ದಿನದಂದು ಈ ಉತ್ಸವ ನಡೆಯಲಿದ್ದು ಲಕ್ಷಾಂತರ ಭಕ್ತರು ಹಾಲರವಿ ಉತ್ಸವವನ್ನು ಕಣ್ತುಂಬಿಕೊಂಡರು. ಸ್ಥಳೀಯ ಬೇಡಗಂಪಣ ಸಮುದಾಯದವರು ಮಾದೇಶ್ವರನಿಗೆ ನಡೆಸುವ ಉತ್ಸವ ಇದಾಗಿದ್ದು ಸಮುದಾಯದ 10 ರಿಂದ 12 ವರ್ಷದ 101 ಹೆಣ್ಣು ಮಕ್ಕಳು ಇದರಲ್ಲಿ ಭಾಗಿಯಾಗುತ್ತಾರೆ.
ಇದನ್ನೂ ಓದಿ- Solar Eclipse Effect: ದ್ವಾದಶ ರಾಶಿಗಳ ಮೇಲೆ ಸೂರ್ಯಗ್ರಹಣದ ಪರಿಣಾಮ
ಉತ್ಸವದಲ್ಲಿ ಪಾಲ್ಗೊಳ್ಳುವ ಹೆಣ್ಣು ಮಕ್ಕಳು, ಉಪವಾಸವಿದ್ದು, ಬೆಳ್ಳಂಬೆಳಗ್ಗೆ ಬೆಟ್ಟದಿಂದ ಸುಮಾರು ಏಳು ಕಿ.ಮೀ ದೂರದಲ್ಲಿರುವ ಹಾಲರವಿ ಬಾವಿಗೆ ತೆರಳಿ ಅಲ್ಲಿ ಸ್ನಾನ ಮಾಡಿ ಹಿತ್ತಾಳೆಯ ಕಳಶದಲ್ಲಿ ಹಾಲರವಿ ಹಳ್ಳದ ನೀರನ್ನು ತುಂಬಿ, ಅದನ್ನು ತಲೆ ಮೇಲೆ ಇರಿಸಿ ಕಳಶಗಳಿಗೆ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ 101 ಹೆಣ್ಣು ಮಕ್ಕಳು ಕಳಶವನ್ನು ಹೊತ್ತು ಏಳು ಕಿ.ಮೀ ಕಾಲ್ನಡಿಗೆಯಲ್ಲೇ ಸಾಗಿ ಬಂದು ಬೆಟ್ಟದ ಪ್ರವೇಶ ದ್ವಾರ ತಲುಪುತ್ತಾರೆ.
ಹಾಲರವಿ ಉತ್ಸವ ಜರಗುವುದಕ್ಕೂ ಮುನ್ನ ಕತ್ತಿ ಪವಾಡ ನಡೆಯುತ್ತದೆ. ಹರಕೆ ಹೊತ್ತ ಭಕ್ತರೊಬ್ಬರು ಕತ್ತಿಯ ಅಲಗಿನ ಮೇಲೆ ಮಲಗುತ್ತಾರೆ. ಅವರ ಮೇಲೆ ಬೇಡಗಂಪಣ ಅರ್ಚಕರು ನಡೆದುಕೊಂಡು ಹೋಗುತ್ತಾರೆ.
ಇದನ್ನೂ ಓದಿ- ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು: ಕಾಂಗ್ರೆಸ್
ಏಳು ಕಿ.ಮೀ ದೂರದಿಂದ ನೀರು ತರುವ ಹೆಣ್ಣುಮಕ್ಕಳು ಉಪವಾಸವಿದ್ದು, ಬರಿಗಾಲಲ್ಲಿ ನಡೆದುಕೊಂಡು ಬರುತ್ತಾರೆ. ಮಾರ್ಗ ಮಧ್ಯದಲ್ಲಿ ಯಾವುದೇ ದುಷ್ಟಶಕ್ತಿಗಳ ಕಣ್ಣು ಬಿದ್ದಿದ್ದರೂ ಕತ್ತಿ ಪವಾಡ ಮಾಡುವ ಸ್ಥಳದಲ್ಲಿ ಇವು ನಿಲ್ಲುವುದಿಲ್ಲ, ಪವಾಡ ಮಾಡಿದ ಸ್ಥಳದಿಂದ ಹಾಲರವಿ ಗಂಗೆ ಶುದ್ಧಳಾಗುತ್ತಾಳೆ ಎಂಬ ನಂಬಿಕೆ ಭಕ್ತರದ್ದಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.