ಮದ್ದೂರು : ಕಬ್ಬಿಣದ ಮಂತ್ರಿ ಕುಮಾರಣ್ಣ. ನೀವು ಮತ್ತು ಬಿಜೆಪಿಯವರು ಕತ್ತರಿ ತಯಾರು ಮಾಡುವವರು. ನಾವು ಸೂಜಿ ತಯಾರು ಮಾಡುತ್ತೇವೆ. ನೀವು ಸಮಾಜವನ್ನು ಕತ್ತರಿಸುವವರು, ನಾವು ಸಮಾಜವನ್ನು ಹೊಲಿಯುವವರು. ಜಾತಿ, ಧರ್ಮ, ಕುಟುಂಬ ಎಂದು ಕತ್ತರಿಸುತ್ತೀರಿ. ಆದರೆ ನಾವು ಎಲ್ಲರನ್ನು ಒಂದುಗೂಡಿಸುತ್ತೇವೆ. ಇದೇ ನಮಗೂ ನಿಮಗೂ ಇರುವ ವ್ಯತ್ಯಾಸ. ಕುಮಾರಣ್ಣ ಈ ಹಿಂದೆ ಏನೇನು ಮಾತನಾಡಿದ್ದೆ. ಯಾರ ಗುಣಗಾನ ಮಾಡಿದ್ದೆ ಎಲ್ಲವನ್ನು ಮೈಸೂರು ಮತ್ತು ಮಂಡ್ಯದಲ್ಲಿ ತೋರಿಸುತ್ತೇವೆ. ನಿನ್ನ ಮಾತು, ಗುಣಗಾನ, ಬಿಜೆಪಿ ಗುಣಗಾನ, ನಿಮ್ಮದು ಅವರದ್ದು ವಾಕ್ಸಮರ ಎಲ್ಲವನ್ನೂ ತೋರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದರು.
ನನ್ನ, ನಿನ್ನ ಆಸ್ತಿಯ ಪಟ್ಟಿಯಿದೆ. ನಿನ್ನ ಬೇನಾಮಿಯಾದ ಸಹೋದರನ ಆಸ್ತಿಯ ಪಟ್ಟಿ ಕೊಡಪ್ಪಾ. ನೀನು ಅಧಿಕಾರದಲ್ಲಿ ಇದ್ದಾಗ ಕನಕಪುರ ಸೇರಿದಂತೆ ಇತರೆಡೆ ಮಾಡಿರುವ ಪಟ್ಟಿ ಹೇಳಿದ್ದೇನೆ. ನೀನು ಒಂದು ಪಟ್ಟಿ ಕೊಡು ಹಾಗೂ ಮೊದಲು ಪಾದಯಾತ್ರೆ ಏಕೆ ಬೇಡ ಎಂದು ಹೇಳಿದೆ ನಂತರ ಏಕೆ ಒಪ್ಪಿಕೊಂಡೆ ಇದಕ್ಕೆ ಮೊದಲು ಉತ್ತರಿಸು ಎಂದು ಆಗ್ರಹಿಸಿದರು.
ಇದನ್ನೂ ಓದಿ:ನನ್ನ ಅಜ್ಜಯ್ಯನ ಸುದ್ದಿಗೆ ಬರಬೇಡ, ಹೆದರುವವನು ನಾನಲ್ಲ : ಹೆಚ್ಡಿಕೆಗೆ ಡಿಸಿಎಂ ತಿರುಗೇಟು
ಲೂಟಿಗೆ ಉತ್ತರ ಕೊಡಿ : ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಎಪಿಎಂಸಿಯಿಂದ 47 ಕೋಟಿ ಲೂಟಿ. ಭೋವಿ ಅಭಿವೃದ್ದಿ ನಿಗಮದಲ್ಲಿ 87 ಕೋಟಿ, ದೇವರಾಜು ಅರಸು ಟ್ರಕ್ ಟರ್ಮಿನಲ್ 50 ಕೋಟಿ, ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ, ಕೊರೋನಾ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದರು. ಪಿಎಸ್ ಐ ಹಗರಣ, ಪರಶುರಾಮ ಪ್ರತಿಮೆ ಹಗರಣ, ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆಯಲ್ಲಿ 700 ಕೋಟಿಗೂ ಹೆಚ್ಚು ಅಕ್ರಮ ಹಣದ ದಾಖಲೆಗಳು ದೊರೆಯಿತು. ಅಂಗನವಾಡಿಯ ಮಕ್ಕಳ ಮೊಟ್ಟೆ ಹಗರಣ. ಕುಮಾರಸ್ವಾಮಿ ಅವರ ಗಣಿ ಹಗರಣದ ಬಗ್ಗೆ ಆನಂತರ ಮಾತನಾಡುತ್ತೇನೆ ಎಂದರು.
ಮುಸ್ಲಿಮರಿಗೆ ಧಮ್ಕಿ ದುರದೃಷ್ಟಕರ : ನಮಗೆ ಮತ ನೀಡದ ಮುಸ್ಲಿಮರ ಗತಿ ಏನಾಗುತ್ತದೆ ನೋಡಿ ಎಂದು ಕುಮಾರಸ್ವಾಮಿ ಅವರು ಧಮ್ಕಿ ಹಾಕಿದ್ದಾರೆ. ನೀವು, ನಿಮ್ಮ ತಂದೆ ಮುಸ್ಲಿಂ ಮತದಾರರು ಇಲ್ಲದಿದ್ದರೇ ವಿಧಾನಸಭೆಗೆ ಹೋಗುತ್ತಲೇ ಇರಲಿಲ್ಲ. ಮಿಸ್ಟರ್ ಕುಮಾರಸ್ವಾಮಿ ನಿಮ್ಮ ತಂದೆ ʼಮುಂದಿನ ಜನ್ಮದಲ್ಲಿ ಹುಟ್ಟಿದರೆ ಮುಸಲ್ಮಾನನಾಗಿ ಹುಟ್ಟುತ್ತೇನೆʼ ಎಂದು ಹೇಳಿದ್ದರು. ಈ ಮಾತು ಮರೆಯಬೇಡಿ ನೆನಪಿನಲ್ಲಿಟ್ಟುಕೊಳ್ಳಿ” ಎಂದು ಹೇಳಿದರು.
ನಮ್ಮ ದೇಶ ಎಲ್ಲಾ ಜಾತಿ, ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಎಸ್.ಎಂ.ಕೃಷ್ಣ ಅವರು ಕುವೆಂಪು ಅವರು ಬರೆದ ಹಾಡನ್ನು ನಾಡಗೀತೆಯನ್ನಾಗಿ ಘೋಷಣೆ ಮಾಡಲಾಯಿತು. ಇದರಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂದು ಕರ್ನಾಟಕವನ್ನು ಕರೆಯಲಾಗಿದೆ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಯಾರೂ ಬಗ್ಗುವುದಿಲ್ಲ. ಎಲ್ಲಾ ಧರ್ಮದವರು ಸಹೋದರರಂತೆ ಬಾಳಬೇಕು. ನಿಮ್ಮ ಧಮ್ಕಿಗೆ ಯಾವ ಮುಸಲ್ಮಾನ ಬಂಧುಗಳು ಹೆದರುವುದಿಲ್ಲ. ಈ ವಿಚಾರದಲ್ಲಿ ಅವರಿಗೆ ಜ್ಞಾನ, ಪರಿಜ್ಞಾನ ಬರಲಿ ಎಂದರು.
ಇದನ್ನೂ ಓದಿ:ಅಗಸ್ಟ್ 21ರ ನಂತರ ಖಾಸಗಿ ಶಾಲೆಗಳು ಬಂದ್ !ಸರ್ಕಾರದ ವಿರುದ್ದ ಹೋರಾಟಕ್ಕಿಳಿದ ರುಪ್ಸಾ ಸಂಘಟನೆ
ನನ್ನ ಅಧ್ಯಕ್ಷತೆಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆದ್ದಿದೆ. ನಿನ್ನ ಅಧ್ಯಕ್ಷತೆಯಲ್ಲಿ ಗೆದಿದ್ದು ಕೇವಲ 19 ಸ್ಥಾನಗಳು ಮಾತ್ರ. ಈಗ ಎರಡು ಸೀಟು ಗೆದ್ದು, ಬಿಜೆಪಿಯವರನ್ನು ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದೀಯಾ. ನಿನ್ನ ಮಗ ಹಾಗೂ ಜಿ,ಟಿ.ದೇವೇಗೌಡರು ಪಾದಯಾತ್ರೆಗೆ ಹೋಗುವುದಿಲ್ಲ ಎಂದು ಏಕೆ ಹೇಳಿದರು ಎಂದು ವ್ಯಂಗ್ಯವಾಡಿದರು.
ಚನ್ನಪಟ್ಟಣದಲ್ಲಿ ಒಬ್ಬರಿಗೆ ಒಂದೇ ಒಂದು ಸೈಟು, ಮನೆ, ರೈತರಿಗೆ ಭೂಮಿ ಕೊಟ್ಟಿಲ್ಲ. ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ಒಂದೇ ಒಂದು ಸಹಾಯ ಮಾಡಿಲ್ಲ. ಜೆಡಿಎಸ್ ಅನ್ನು ಬಿಜೆಪಿ ಜೊತೆ ವಿಲೀನ ಮಾಡಿದರೆ ಈ ದೇಶ ಹಾಗೂ ರಾಜ್ಯಕ್ಕೆ ಒಳ್ಳೆಯದು ಎಂದರು.
ಎಸ್.ಎಂ.ಕೃಷ್ಣ ಅವರನ್ನು ನೆನೆಸಿಕೊಂಡಿರುವ ಕುಮಾರಸ್ವಾಮಿ ಅವರೇ ಅವರ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ ಇದೆಯೇ? ನೀನು ಪಾದಯಾತ್ರೆ ಮಾಡುತ್ತಿರುವ ರಸ್ತೆ ಕೃಷ್ಣ ಅವರು ಮಾಡಿದ್ದು. ಈ ರೀತಿಯ ಒಂದೇ ಒಂದು ಕೆಲಸ ಮಾಡಿದ್ದೀಯಾ. ಸೋಮನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶ ಮಾಡಿಸಿದ್ದಾರೆ. ಅವರಂತೆ ನಿನಗೆ ಮಾಡಲು ಆಗುತ್ತದೆಯೇ? ಕೇವಲ ಖಾಲಿ, ಬುಡಬುಡಕೆ ಮಾತುಗಳು ಬೇಡ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.