ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇ-ಕೆವೈಸಿ ನೊಂದಣಿ ಮಾಡಿಕೊಳ್ಳುವುದು ಹೇಗೆ ಗೊತ್ತೇ ?

ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

Written by - Manjunath N | Last Updated : Aug 9, 2023, 10:26 PM IST
  • ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಮುಂದಿನ ಕಂತು ತಮ್ಮ ಖಾತೆಗೆ ಜಮೆ ಅಗುವುದಿಲ್ಲ
  • ಮುಂದಿನ ಯೋಜನೆಯ ಆರ್ಥಿಕ ಸೌಲಭ್ಯದಿಂದ ವಂಚಿತರಾಗಬಹುದು.
ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇ-ಕೆವೈಸಿ ನೊಂದಣಿ ಮಾಡಿಕೊಳ್ಳುವುದು ಹೇಗೆ ಗೊತ್ತೇ ? title=
file photo

ಬೆಂಗಳೂರು:ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಮುಂದಿನ ಕಂತು ತಮ್ಮ ಖಾತೆಗೆ ಜಮೆ ಅಗುವುದಿಲ್ಲ ಹಾಗೂ ಮುಂದಿನ ಯೋಜನೆಯ ಆರ್ಥಿಕ ಸೌಲಭ್ಯದಿಂದ ವಂಚಿತರಾಗಬಹುದು. ಆದ್ದರಿಂದ ಇಲ್ಲಿಯವರೆಗೂ ಇ-ಕೆವೈಸಿ ಮಾಡಿಸದ ರೈತ ಫಲಾನುಭವಿಗಳು ತಮ್ಮ ಆಧಾರ್‍ಸಂಖ್ಯೆ ಹಾಗೂ ಆಧಾರ್‍ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊಂದಿಗೆ ತಮ್ಮ ಹತ್ತಿರದ ಗ್ರಾಹಕರ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಓಟಿಪಿ ಅಥವಾ ಬಯೋ-ಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

ರೈತರು ತಾವೇ ಸ್ವತಃ ಖುದ್ದಾಗಿ PM-kisan ವೆಬ್‍ಸೈಟ್(ತಂತ್ರಾಂಶ)ದಲ್ಲಿ ಲಿಂಕ್‍ನ್ನು ಬಳಸಿ ಓಟಿಪಿ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದು ಅಥವಾ ಸಮೀಪದ ಅಂಚೆ ಕಚೇರಿಗೆ ಭೇಟಿ ನೀಡಿ ಪೋಸ್ಟಲ್ ಅಕೌಂಟ್ (POSTAL ACCOUNT) ತೆರೆಯುವ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು ಅಥವಾ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ಮುಖ ತೋರಿಸುವ (Face Recognisation) ಆಪ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆ ನೊಂದಾಯಿಸಿಕೊಳ್ಳಬಹುದು.

ಎಲ್ಲಾ  ರೈತರು ಇ-ಕೆವೈಸಿ ಮಾಡಿಸಿ ತಮ್ಮ ಅಕ್ಕಪಕ್ಕದ ರೈತರಿಗೆ ಮಾಡಿಸುವಂತೆ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳಿಗೆ ಸಂಪರ್ಕಿಸಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News