ಚಾಮರಾಜನಗರ : ಎಳ್ಳು ಅಮಾವಾಸ್ಯೆ ಹಿನ್ನೆಲೆ ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗಾರವೇ ಹರಿದು ಬಂದಿತ್ತು. ಬೆಂಗಳೂರು, ರಾಮನಗರ, ಕನಕಪುರ, ಮೈಸೂರು, ಮಂಡ್ಯ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ನಂಜನಗೂಡು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಸೇವೆಗಳನ್ನು ಸಮರ್ಪಿಸಿ ದರ್ಶನ ಪಡೆದರು.
ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವ್ಯವಸ್ಥಿತ ಸರತಿ ಸಾಲು, ಶಿಫಾರಸ್ಸು ಪತ್ರ ತಂದವರಿಗೆ ನೇರದರ್ಶನ, 60 ವರ್ಷ ಮೇಲ್ಪಟ್ಟವರಿಗೂ ವಿಶೇಷ ದರ್ಶನ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.
ಇದನ್ನೂ ಓದಿ: ಬಾಗಲಕೋಟೆಯ ಕೊತ್ತಲೇಶ್ವರ ದೇವಸ್ಥಾನದಿಂದ ಸಂಕಲ್ಪ ಯಾತ್ರೆ ಶುರು
ಮಾದಪ್ಪನಿಗೆ ತ್ರಿಕಾಲ ಪೂಜೆಯ ಜೊತೆಗೆ ಎಳ್ಳಿನ ಎಣ್ಣೆಯಿಂದ ಅಭಿಷೇಕ, ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ರಾಜಗೋಪುರ ಗರ್ಭಗುಡಿಯ ಗೋಪುರ, ಕಟ್ಟೆ ಬಸವೇಶ್ವರ ದೇವಾಲಯದ ಒಳಾಂಗಣ ಹೊರಾಂಗಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.