ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ, ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ:ಎಂ ಬಿ ಪಾಟೀಲ್

ಖಾಸಗಿ ಉದ್ಯಮಗಳಲ್ಲಿ ಕೂಡಾ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

Written by - Ranjitha R K | Last Updated : Jul 17, 2024, 01:53 PM IST
  • ಕೆಲವು ಶ್ರೇಣಿಯ ಹುದ್ದೆಗಳಲ್ಲಿ ನೂರಕ್ಕೆ ನೂರರಷ್ಟು ಮೀಸಲು
  • ಈ ಸಂಬಂಧ ಸರ್ಕಾರ ವಿಧೇಯಕಕ್ಕೆ ಅನುಮೋದನೆ ನೀಡಿದೆ.
  • ಸಚಿವ ಎಂ ಬಿ ಪಾಟೀಲ್ ಸ್ಪಷ್ಟನೆ
ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ, ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ:ಎಂ ಬಿ ಪಾಟೀಲ್  title=

ಬೆಂಗಳೂರು : ಖಾಸಗಿ ಉದ್ಯಮಗಳಲ್ಲಿ ಕೂಡಾ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.ಇದೇ ವೇಳೆ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಈ ಸಂಬಂಧ ಸರ್ಕಾರ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದು ಎಂ ಬಿ ಪಾಟೀಲ್ ತಿಳಿಸಿದ್ದಾರೆ. 

ಇದನ್ನೂ ಓದಿ : ಕರ್ನಾಟಕ 2 ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ರಿಲೀಸ್‌..ಮಾರ್ಕ್ಸ್‌ಶೀಟ್‌ ಡೌನ್‌ಲೋಡ್‌ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ...

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ.ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು.ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು.ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಅರಬ್ಬೀ ಸಮುದ್ರ,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ - ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ

ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ.'ಗ್ಲೋಬಲ್ ಚೈನಾ ಒನ್' ನೀತಿಯಿಂದ ಒದಗಿ ಬಂದಿರುವ ಸದಾವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಇದೆ ವೇಳೆ ತಿಳಿಸಿದ್ದಾರೆ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ್  ಬಣ್ಣಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News