ಬೆಂಗಳೂರು: ದಿನಬಳೆಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ಚಿನ್ನದ ಬೆಲೆಯ ರೀತಿಯಲ್ಲಿ ಏರಿಕೆಯಾಗುತ್ತಿದ್ದು, ಜನಸಮಾನ್ಯರಿಗೆ ಕೈಗೆಟುಕದ ರಿತ್ತಿಯಲ್ಲಿ ಆಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬೆಲೆ ಏರಿಕೆ ಬಗ್ಗೆ ಕಿಂಚಿತ್ತೂ ಗಮನಹರಿಸುತ್ತಿಲ್ಲ. ಕೇಳುವರಿಲ್ಲ ಹೇಳುವರಿಲ್ಲ ಎನ್ನುವ ಪರಿಸ್ಥಿತಿ ಸ್ವಾತಂತ್ರ್ಯ ಬಂದು 76 ವರ್ಷವಾದರೂ ದೇಶ ಮತ್ತು ರಾಜ್ಯದಲ್ಲಿ ಉಂಟಾಗಿದೆ ಎಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಗಾಂಧೀಜಿ ಅವರ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸ್ವಾತಂತ್ರ್ಯ ದಿನವನ್ನು ಆಚರಿಸುವ ಜೊತೆಗೆ ತಳ್ಳುವ ಗಾಡಿಯಲ್ಲಿ ತರಕಾರಿಗಳನ್ನು ಮಾರಿ ವಿನೂತನ ಪ್ರತಿಭಟನೆ ನೆಡೆಸಿ ಮಾತನಾಡಿದ ಅವರು, ಟೊಮ್ಯಾಟೋ ಬೆಳೆಯನ್ನು ಇಳಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಲಂಚಕೋರತನ, ಭ್ರಷ್ಟಾಚಾರದಿಂದ ಕೂಡ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ಮಧ್ಯವರ್ತಿಗಳ ಹಾವಳಿಯಿಂದ ರೈತರಿಗೂ ಸರಿಯಾಗಿ ಹಣ ಸಿಗದಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಗಡಿ ನಿಯಂತ್ರಣ ರೇಖೆಯಲ್ಲಿ ಹೈಅಲರ್ಟ್
ಕಾಂಗ್ರೆಸ್ ಪಕ್ಷ ಮೇಕೆದಾಟು ಪಾದಯಾತ್ರೆ ಮಾಡಿತು. ತಮ್ಮ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದರೆ ಹೊರತು ಕನ್ನಡ ಮತ್ತು ರೈತ ಪರ ಹೊರಟಗಾರರ ಮೇಲಿನ ಪ್ರಕರಣಗಳು ಹಾಗೆಯೇ ಉಳಿಸಿದ್ದಾರೆ. ಇದು ಅನ್ಯವಾಗಿದೆ. ಮತ್ತೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಇದು ಮುಂದುವರೆದರೆ ರಾಜ್ಯದೆಂತ ಹೋರಾಟ ಮಾಡಲಾಗುವುದು ಎಂದು ಈ ಸಂಧರ್ಭದಲ್ಲಿ ಎಚ್ಚರಿಸಿದರು.
ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದೆ. ಮೇಕೆದಾಟು ಯೋಜನೆಯನ್ನು ಸಹ ನಿರ್ಲಕ್ಷಿಸಲಾಗುತ್ತಿದೆ. ಮಹಾತ್ಮಾ ಗಾಂಧೀಜಿ ಅವರ ಹೋರಾಟದ ಉದ್ದೇಶ ಮರೆತು ನೆಡೆಯುತ್ತಿರುವುದು ಇದಕ್ಕೆಲ್ಲ ಕಾರಣ. ರಾಜಕಾರಿಣಿಗಳು ಜನಪರ ಕೆಲಸವನ್ನು ಬಿಟ್ಟು ಲೂಟಿಗೆ ಇಳಿದಿರುವುದು ಶೋಚನೀಯ ಎಂದು ವಿಷಾದಿಸಿದರು.
ಇದನ್ನೂ ಓದಿ: "ಹಿತೈಷಿಗಳು ಮನವೊಲಿಸಲು ಪ್ರಯತ್ನಿಸುತ್ತಿದ್ದರೂ ನಮ್ಮ ಪಕ್ಷವು ಬಿಜೆಪಿಯೊಂದಿಗೆ ಹೋಗುವುದಿಲ್ಲ"
ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೊಲೆ ಸುಲಿಗೆ ಆತ್ಮಹತ್ಯೆ ನಿತ್ಯ ನಿರಂತರವಾಗಿ ನೆಡಯುತ್ತಿದೆ. ರೈತರ ಬೆಳೆ ನಾಶದ ಬಗ್ಗೆ ಕಿಂಚಿತ್ತೂ ಯಾರು ಚಿಂತಿಸುತ್ತಿಲ್ಲ. ಸ್ವೇಚ್ಚಾಚಾರ ಎಲ್ಲೆಡೆ ತಾಂಡವಾಡುತ್ತಿದೆ. ಪ್ರಮಾಣಿಕರು ಆರಿಸಿ ಬಂದಾಗ ಮಾತ್ರ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ ಎಂದು ತಿಳಿಸಿದರು.
ಬಡವರ ಕಣ್ಣೀರು, ನಿರಂತರ ಮಧ್ಯಮ ವರ್ಗದವರ ಹೀನಾಯ ಪರಿಸ್ಥಿತಿ ಶಾಹನೀಯವಾಗಿದೆ. ಸ್ವಾತಂತ್ರ್ಯವನ್ನು ಭ್ರಷ್ಟರು, ಶ್ರೀಮಂತರು ದುರುಪಯೋಗಪಡಿಸಿ ಕೊಂಡಿದ್ದಾರೆ. ಲೋಕಸಭೆ, ಶಾಸನ ಸಭೆಗಳು ಭ್ರಷ್ಟರ, ಜಾತಿವಾದಿಗಳ, ಅಪರಾಧಿಗಳ ಕೂಟವಾಗಿದೆ. ಭ್ರಷ್ಟರ ವ್ಯವಸ್ಥೆಯಲ್ಲಿ ಚುನಾವಣೆಗಳು ನಡೆಯುತ್ತಿವೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಚುನಾವಣೆಯ ಬಗ್ಗೆ ನಂಬಿಕೆ ಹೋಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಹಾತ್ಮ ಗಾಂದೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸುವ ಮೂಲಕ ಪ್ರಜಾಪ್ರಭುತ್ವ ಗೌರವಿಸಿ, ಭ್ರಷ್ಟಾಚಾರ ತೊಲಗಿಸಿ, ಪ್ರಾಮಾಣಿಕವಾಗಿ ಚುನಾವಣೆಗಳು ನಡೆಯಬೇಕು ಎಂದು ಆಶಿಸಿದ್ದೇನೆ. ಶಾಸನ ಸಭೆ ಹಾಗೂ ಲೋಕಸಭೆಗೆ ಪ್ರಾಮಾಣಿಕರು ಬರಬೇಕು ಇದನ್ನು ಪ್ರತಿಪಾದಿಸಲು ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ತರಕಾರಿ ತಳ್ಳುವ ಗಾಡಿ ಮುಂದೆ ಮಹಾತ್ಮ ಗಾಂಧೀಜಿಯವರ ಭಾವಚಿತ್ರವಿಟ್ಟು ಸತ್ಯಾಗ್ರಹ ನೆಡೆಸುತ್ತಿದ್ದೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.