ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸಾಮಾಜಿಕ ತಾಣದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿದ  ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.  

Written by - Prashobh Devanahalli | Last Updated : Aug 17, 2023, 01:05 PM IST
  • ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?
  • ತಕ್ಷಣ ನೀರು ಹರಿಸುವುದು ನಿಲ್ಲಿಸಲು ಆಗ್ರಹ
  • ಸರ್ವಪಕ್ಷ ಸಭೆ ಕರೆಯಲು ಮುಖ್ಯಮಂತ್ರಿಗೆ ಒತ್ತಾಯ
ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ title=

ಬೆಂಗಳೂರು : ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಆಗ್ರಹಿಸಿದ್ದಾರೆ.  ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. 

ಈ ಬಗ್ಗೆ ಸಾಮಾಜಿಕ ತಾಣದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿದ  ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.   ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : 100ರ ಗಡಿ ದಾಟಿದ ಬಾಳೆ ಹಣ್ಣಿನ ಬೆಲೆ ! ಹಬ್ಬದ ವೇಳೆ ಇನ್ನೂ ದರ ಏರಿಕೆ ಸಾಧ್ಯತೆ

ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ ಇಂಥದ್ದರಲ್ಲಿ , ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ  ಎಂದು ಸರ್ಕಾರದ ವಿರುದ್ದ ಜರಿದಿದ್ದಾರೆ. 

2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಎಂದು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ  ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ : ಕಮಲ ಶಾಸಕರ ಘರ್ ವಾಪ್ಸಿಗೆ ಸಿಎಂ ಸಿದ್ದರಾಮಯ್ಯ ವಿರೋಧ!

ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಕೆಶಿ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಎನ್ನುವುದನ್ನು  ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? ಎಂದು ಮಾಜಿ ಮುಖ್ಯಮಂತ್ರಿ  ಪ್ರಶ್ನಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News