ಬೆಂಗಳೂರು : ಸಿಎಂ ಬದಲಾವಣೆ ವಿಚಾರದಲ್ಲಿ ಸತ್ಯಾಂಶ ಇಲ್ಲ. 7-8 ತಿಂಗಳು ಇರುವಾಗ ಬದಲಾವಣೆ ಇಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿಎಂ ಬೊಮ್ಮಾಯಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರವಾಸಕ್ಕು ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ಕುಟುಂಬ ಸಮೇತ ಮಂತ್ರಾಲಯಕ್ಕೆ ಹೋಗ್ತಿದ್ದೇವೆ. ಬಹಳ ದಿನಗಳು ಆಯ್ತು ರಾಯರ ದರ್ಶನ ಮಾಡಿ. ನಾಳೆ ಮಂತ್ರಾಲಯ ಪ್ರವಾಸ ಮುಗಿಸಿ ವಾಪಸ್ಸು ಬರುತ್ತೇನೆ. ಮಂತ್ರಾಲಯದಿಂದ ಬಂದ ನಂತರ ರಾಜ್ಯ ಪ್ರವಾಸ ಮಾಡ್ತೀನಿ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬಾರದ ರೀತಿ ನಾವು ನೋಡಿಕೊಳ್ತೇವೆ. ಯಾರು ಸಿಎಂ ಕನಸ್ಸು ಕಾಣ್ತಿದ್ದಾರೋ ಅವರ ಭ್ರಮೆ ಅಷ್ಟೇ. ಯಾವುದೇ ಕಾರಣಕ್ಕೂ ಅವರ ಆಸೆ ಈಡೇರುವುದಿಲ್ಲ. ನೂರಕ್ಕೂ ನೂರರಷ್ಟು ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : Rakesh Tikait : ರಾಕೇಶ್ ಟಿಕಾಯತ್ಗೆ ಮಸಿ ಬಳಿದ ಪ್ರಕರಣ : 450 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು
ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸತ್ಯಾಂಶ ಇಲ್ಲ. ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಯಾರೊಬ್ಬರ ಅದರ ಬಗ್ಗೆ ಚರ್ಚೆ ಮಾಡಬಾರದು, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಅಮಿತ್ ಷಾ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಆಗುತ್ತದೆ. ಇದಕ್ಕೆ ಹೈಕಮಾಂಡ್ ನಾಯಕರು ಕೂಡ ಸಹಕಾರ ಕೊಡ್ತಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೇಳಿದ್ದೇನೆ. ಅಂತಿಮವಾಗಿ ಅವರ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡೋದು ಹೈಕಮಾಂಡ್. ಆದರೆ ಶಿಕಾರಿಪುರ ಸ್ಪರ್ಧೆ ಬಗ್ಗೆ ಅಮಿತ್ ಷಾ ಜೊತೆ ನಾನು ಏನು ಚರ್ಚೆ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ : Davanagere : ಖಾಸಗಿ ಬಸ್ ಪಲ್ಟಿಯಾಗಿ 20 ಜನರಿಗೆ ಗಾಯ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.