ಬೆಂಗಳೂರು :ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ. ಇನ್ನು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡಿದ್ದು, 8 ಜನರು ಮೃತಪಟ್ಟಿದ್ದಾರೆ. ಎಂಟು ಜನರ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನು 8 ಜನರನ್ನು ರಕ್ಷಣೆ ಮಾಡಲಾಗಿದೆ. ಎಂಟು ಜನರ ಪೈಕಿ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರನ್ನು ಬಿಟ್ಟಬಿಡದೇ ಕಾಡುತ್ತಿರುವ ವರುಣ
ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಹೇಳಿದೆ. ಸಾವನ್ನಪ್ಪಿರುವ 8 ಜನರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ಮತ್ತು ಬಿಬಿಎಂಪಿಯಿಂದ 3 ಲಕ್ಷ ಹೀಗೆ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ.
ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಸಿಎಂ ಮನವಿ :
ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದು ಎಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ , ಈ ದುರಾದೃಷ್ಟರ ಘಟನೆ ನಡೆದಿದೆ.ಈ ಕಟ್ಟಡ ಕುಸಿತಕ್ಕೆ ಕಳಪೆ ಕಾಮಗಾರಿಏ ಕಾರಣ ಹೊರತು ಮಳೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾರಣದಿಂದಲ್ಲ. ಅನಧಿಕೃತ ಕಟ್ಟಡ ನಿರ್ಮಾಣವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಮೊದಲ ಬಾರಿ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.