ಯುವ ನಿಧಿ ಘೋಷಿಸಿದ ಕಾಂಗ್ರೆಸ್ ಸರ್ಕಾರ ಈಗ ವಿವಿಗಳನ್ನೇ ಮುಚ್ಚಲು ಹೊರಟಿರುವುದು ಅಕ್ಷಮ್ಯ : ಪ್ರಲ್ಹಾದ ಜೋಶಿ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು 10 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ಅವನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿಯಿಡುತ್ತಿದೆ ಎಂದು ಹರಿ ಹಾಯ್ಡಿದ್ದಾರೆ.  

Written by - Ranjitha R K | Last Updated : Feb 16, 2025, 11:17 AM IST
  • ರಾಜ್ಯದ 9 ವಿವಿಗಳ ವ್ಯಾಪ್ತಿಯ ವಿದ್ಯಾರ್ಥಿಗಳ ಮೂಲಭೂತ ಹಕ್ಕಿಗೆ ಕೊಡಲಿ ಪೆಟ್ಟು
  • ವಿವಿಗಳನ್ನೂ ಆದಾಯದ ಸರಕನ್ನಾಗಿ ನೋಡುತ್ತಿದೆ ಕಾಂಗ್ರೆಸ್ ಸರ್ಕಾರ
  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ
ಯುವ ನಿಧಿ ಘೋಷಿಸಿದ ಕಾಂಗ್ರೆಸ್ ಸರ್ಕಾರ ಈಗ ವಿವಿಗಳನ್ನೇ ಮುಚ್ಚಲು ಹೊರಟಿರುವುದು ಅಕ್ಷಮ್ಯ : ಪ್ರಲ್ಹಾದ ಜೋಶಿ title=

ಹುಬ್ಬಳ್ಳಿ: ಪದವೀಧರರಿಗೆ "ಯುವ ನಿಧಿ" ಗ್ಯಾರೆಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಅಂಥ ಪದವೀಧರರನ್ನು ರೂಪಿಸೋ ವಿವಿಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ರಾಜ್ಯ ಸಚಿವ ಸಂಪುಟದ ಉಪ ಸಮಿತಿ ರಾಜ್ಯದಲ್ಲಿನ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕೈಗೊಂಡಿರುವ ತೀರ್ಮಾನಕ್ಕೆ ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು 10 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ಅವನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿಯಿಡುತ್ತಿದೆ ಎಂದು ಹರಿ ಹಾಯ್ಡಿದ್ದಾರೆ.

ಇದನ್ನೂ ಓದಿ ನೆಲಮಂಗಲದ ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಭ್ಯರ್ಥಿ ಎನ್‌.ಗಣೇಶ್‌ ಆಯ್ಕೆ

ಶಿಕ್ಷಣದ ಮೂಲಭೂತ ಹಕ್ಕಿಗೆ ಕೊಡಲಿಪೆಟ್ಟು: ಶಿಕ್ಷಣ ಸರ್ವರ ಮೂಲಭೂತ ಹಕ್ಕು. ಆದರೆ, ರಾಜ್ಯ ಸರ್ಕಾರ ಇದನ್ನು ಕಸಿದುಕೊಳ್ಳುತ್ತಿದೆ. ಒಂದೆಡೆ ಅರೆಬರೆ ಯುವ ನಿಧಿ ನೀಡುತ್ತ, ಇನ್ನೊಂದೆಡೆ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳಿಸಲು ನೋಡುತ್ತಿದೆ. ಶಿಕ್ಷಣದ ಮೂಲಭೂತ ಹಕ್ಕಿಗೆ ಕೊಡಲಿ ಪೆಟ್ಟು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ವಿವಿಗಳಿಗಲ್ಲ; ಸರ್ಕಾರಕ್ಕೇ ಆರ್ಥಿಕ ಸಂಕಷ್ಟ: ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಗಳನ್ನೂ ಆದಾಯದ ಮೂಲ ಮತ್ತು ಒಂದು ಸರಕನ್ನಾಗಿ ನೋಡುತ್ತಿರುವುದು ಖಂಡನೀಯ. ವಿವಿಗಳು ಆರ್ಥಿಕ ಮತ್ತು ಅಗತ್ಯ ಭೂಮಿಯ ಕೊರತೆ ಎದುರಿಸುತ್ತಿವೆ ಎಂಬ ಕುಂಟು ನೆಪವೊಡ್ಡುವ ಈ ಸರ್ಕಾರವೇ ಮೊದಲು ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಸುಖೋಯ್-‌57 ಫೈಟರ್‌ ಜೆಟ್‌ ನೀಡಲಿರುವ ರಷ್ಯಾ

ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಸಭೆ ನಡೆಸುವ ಮೊದಲು ತಮ್ಮ ಸರ್ಕಾರ ಮತ್ತು ಇಲಾಖೆಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆಗೆ ಸಭೆ ನಡೆಸುವುದು ಒಳಿತು ಎಂದು ಸಚಿವ ಜೋಶಿ ಸಲಹೆ ಮಾಡಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದ ಎಲ್ಲಾ ಭಾಗದವರಿಗೂ ಉನ್ನತ ಶಿಕ್ಷಣ ಕೈಗೆಟುಕಲು ಅನುವಾಗುವಂತೆ ಒಟ್ಟು 10 ವಿವಿಗಳನ್ನು ಸ್ಥಾಪಿಸಿತು. ಆದರೆ, ಕಾಂಗ್ರೆಸ್ ಸರ್ಕಾರ ಬೀದರ್ ವಿವಿ ಒಂದನ್ನು ಬಿಟ್ಟು ಹಾಸನ, ಮಂಡ್ಯ ಚಾಮರಾಜನಗರ, ಕೊಡಗು, ಹಾವೇರಿ, ಬಾಗಲಕೋಟೆ, ಕೊಪ್ಪಳ, ಮಹಾರಾಣಿ ಕ್ಲಸ್ಟರ್, ಮತ್ತು ನೃಪತುಂಗ ವಿವಿಗಳಿಗೆ ಬೀಗ ಹಾಕಲು ಯೋಚಿಸುತ್ತಿರುವುದು ಈ ಭಾಗದ ವಿದ್ಯಾರ್ಥಿಗಳಿಗೆ ಶೋಷಣೆ ಮಾಡಿದಂತೆ ಎಂದಿದ್ದಾರೆ ಸಚಿವರು.

ಕರಾವಳಿ ಇಂಧನ ಕಡಿತ; ಆಡಳಿತ ವೈಫಲ್ಯಕ್ಕೆ ಕನ್ನಡಿ: ಇನ್ನು, ಕಾಂಗ್ರೆಸ್ ಸರ್ಕಾರ ಕರ್ನಾಟಕ ಕರಾವಳಿ ಭದ್ರತೆಗೆ ಬೇಕಿರುವ ಅಗತ್ಯ ಇಂಧನವನ್ನು ಕಡಿತಗೊಳಿಸಿಸಲು ಆದೇಶಿಸಿದೆ. ಕರಾವಳಿ ಭದ್ರತೆಯ ವಿಚಾರದಲ್ಲಿ ಇಂಧನ ಕಡಿತಗೊಳಿಸಿರುವದು ಇವರ ಆಡಳಿತ ವೈಫಲ್ಯದ ನಿದರ್ಶನ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಚುನಾವಣೆ ವೇಳೆ ಜನರಿಗೆ ಅವೈಜ್ಞಾನಿಕ ರೀತಿ ಭರವಸೆಗಳನ್ನು ನೀಡಿ ಇತ್ತ ಅವನ್ನೂ ನೀಡಲಾಗದೆ, ಜನರಿಗೆ ಬೆಲೆ ಏರಿಕೆ ಬರೆ ಎಳೆದು ಹಿಂಸೆ ಮಾಡುತ್ತಿದೆ. ಆಡಳಿತದಲ್ಲಿ ಭ್ರಷ್ಟಾಚಾರದ ಪರಾಕಾಷ್ಟೆ ಮೀರಿದೆ ಎಂದು ಆರೋಪಿಸಿದ್ದಾರೆ.

ವ್ಯಾಪಕ ಭ್ರಷ್ಟಾಚಾರ, ನಾನಾ ಹಗರಣಗಳು, ಅವೈಜ್ಞಾನಿಕ ರೀತಿಯ ಘೋಷಣೆಗಳಿಂದಾಗಿ ರಾಜ್ಯವನ್ನು ಆರ್ಥಿವಾಗಿ ಮಾತ್ರವಲ್ಲದೆ, ಬೌದ್ಧಿಕವಾಗಿಯೂ ದಿವಾಳಿತನದತ್ತ ಕೊಂಡೊಯ್ಯುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಸಾಮಾಜಿಕ ಜಾಲತಾಣ X ಖಾತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News