ರೈತರ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕೆ

ಕಾವೇರಿ ಸರ್ವಪಕ್ಷ ಸಭೆಗೆ ಗೈರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದರು

Written by - Bhavishya Shetty | Last Updated : Jul 15, 2024, 09:59 PM IST
    • ನಾಲೆಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ್ದಾರೆ
    • ಸಭೆಯಲ್ಲಿ ಕೊಡುವ ಗೊಡಂಬಿ, ಬಾದಾಮಿ ತಿನ್ನಲಿಕ್ಕೆ ಹೋಗಬೇಕಿತ್ತಾ?
    • ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ
ರೈತರ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕೆ title=
File Photo

ನವದೆಹಲಿ: ರೈತರ ನೆಪದಲ್ಲಿ, ನಾಲೆಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಈಗ ಸರ್ವಪಕ್ಷ ಸಭೆ ಕರೆದರೆ ಹೋಗಿ ಏನು ಮಾಡೋದು? ಸಭೆಯಲ್ಲಿ ಕೊಡುವ ಗೊಡಂಬಿ, ಬಾದಾಮಿ ತಿನ್ನಲಿಕ್ಕೆ ಹೋಗಬೇಕಿತ್ತಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕಾವೇರಿ ಸರ್ವಪಕ್ಷ ಸಭೆಗೆ ಗೈರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದರು.

ಇದನ್ನೂ  ಓದಿ: ಅಂಬಾನಿ ಮದುವೆ ಸಂಭ್ರಮ ಹೆಚ್ಚಿಸಿದ ಸಾರಾ ಸೌಂದರ್ಯ..! ಸಚಿನ್‌ ಪುತ್ರಿಯ ಫೋಟೋಸ್‌ ಇಲ್ಲಿವೆ

ಕೆಆರ್‌ಎಸ್ ನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕೊಡುವ ಗೊಡಂಬಿ ಬಾದಾಮಿ ತಿನ್ನೊಕೆ ಹೋಗಬೇಕಿತ್ತಾ ನಾನು? ನೀರು ಬಿಟ್ಟಿದ್ದಕ್ಕೆ ಶಹಬ್ಬಾಸ್ ಗಿರಿ ಕೊಡಲು ಹೋಗಬೇಕಾಗಿತ್ತಾ? ಮಂಡ್ಯದಲ್ಲಿ ನಾನು ಜನತಾ ದರ್ಶನ ಮಾಡಿದರೆ ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಗಳ ಜತೆ ಸಭೆ ನಡೆಸಬಾರದು ಎಂದು ಆದೇಶದ ಮಾಡಿದ ಮೇಲೆ ನಮ್ಮಿಂದ ಏನು ಬಯಸ್ತಾರೆ ಇವರು? ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.

ಪಾಂಡವಪುರದಲ್ಲಿ ಮತ ಕೊಟ್ಟ ಜನರಿಗೆ ಧನ್ಯವಾದ ಹೇಳಬೇಕಿತ್ತು, ಹೋಗಿದ್ದೆ. ಯಾವ ಸಂದರ್ಭದಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂಬುದು ನನಗೆ ಗೊತ್ತಿದೆ. ಇವರ ಅನುಮತಿ ಪಡೆಯಬೇಕಾ? ಏನಕ್ಕೆ ಸಭೆ ಮಾಡಿದ್ದೀರಿ? ಏನು ನಿರ್ಧಾರ ಮಾಡಿದ್ದೀರಿ? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕಿಡಿಕಾರಿದರು.

ಇವರು ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಕ್ಕೆ ಹೋದರೆ ಅಲ್ಲಿನ ಮುಖ್ಯಮಂತ್ರಿಗಳು ಸಿಎಂ ಫೋನ್ ಮಾಡಿ ಸಹಕಾರ ಕೇಳ್ತಾರೆ. ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನು ನಿಲ್ಲಿಸಲು ಪ್ರಯತ್ನ ಮಾಡುತ್ತೀರಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಾವುದೇ ಕಾರ್ಯಕ್ರಮ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇವೆ. ಇವರ ಥರ ಕಾನೂನು ಬಾಹಿರ ಕೆಲಸ ಮಾಡಿಲ್ಲ. ಮುಖ್ಯಮಂತ್ರಿ ಮಾಡಲು ಯಾರು ಇವರ ಹಿಂದೆ ನಿಂತರೋ ಅವರ ಬದುಕಲ್ಲೇ ಚೆಲ್ಲಾಟ ಆಡುತ್ತಿದ್ದಾರೆ. ಅವರು ಎಷ್ಟು ಶಾಪ ಹಾಕ್ತಿದ್ದಾರೆ ಗೊತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ  ಓದಿ:  ನನ್ನ ನಿವೇದಿತಾ ದಾಂಪತ್ಯ ಮುರಿಯಲು ‘ಆ’ ವ್ಯಕ್ತಿಯೇ ಕಾರಣ… ಡಿವೋರ್ಸ್ ಬೆನ್ನಲ್ಲೇ ನುಂಗಲಾರದ ಸತ್ಯ ಬಿಚ್ಚಿಟ್ಟ ಚಂದನ್ ಶೆಟ್ಟಿ

ನಾನು ಕಾರ್ಪೋರೆಷನ್ ಕಸ ಎತ್ತಿದ್ದಿನಿ. ಸಿನಿಮಾ ಡಬ್ಬಾ ಹೊತ್ತಿದ್ದೀನಿ, ನಮ್ಮ ಕಾಲದಲ್ಲಿ ಸಿಡಿ ಇರಲಿಲ್ಲ. ಕಂಡ ಕಂಡ ಕಡೆ ಕೊಳ್ಳೆ ಹೊಡೆದು ಜೀವನ ಮಾಡಿಲ್ಲ. ಭಾನುವಾರವೂ ಸಭೆ ನಡೆಸಿ ನನ್ನ ವಿರುದ್ಧ ದಾಖಲೆ ಹುಡುಕುತ್ತಿದ್ದಾರೆ. ಸಣ್ಣ ಪುಟ್ಟ ಏನಾದರೂ ಸಿಗುತ್ತವಾ ಎಂದು ಹುಡುಕುತ್ತಿದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News