ಬೆಂಗಳೂರು: ಪಠ್ಯಪುಸ್ತಕಗಳನ್ನು ‘ಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. #ಪಠ್ಯಪುಸ್ತಕ_ಪಕ್ಷಪುಸ್ತಕ ಹ್ಯಾಶ್ ಟ್ಯಾಗ್ ಬಳಸಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಪಠ್ಯಪುಸ್ತಕಗಳನ್ನು ‘ಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್ ಮಾಡಿ ಡಿಲೀಟ್ ಮಾಡುವುದು. ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜೊತೆ ಮೈತ್ರಿ ಸರ್ಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ‘ಆಪರೇಷನ್ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ‘ಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ?’ವೆಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ? 2/7#ಪಠ್ಯಪುಸ್ತಕ_ಪಕ್ಷಪುಸ್ತಕ
— H D Kumaraswamy (@hd_kumaraswamy) May 17, 2022
ಇದನ್ನೂ ಓದಿ: ಪಠ್ಯದಲ್ಲಿ ಹೆಡ್ಗೆವಾರ್ ಭಾಷಣ: ಬಿಜೆಪಿ ಸರ್ಕಾರದ ರಾಷ್ಟ್ರಭಕ್ತಿಯ ಮುಖವಾಡ ಕಳಚಿದೆ ಎಂದ ಕಾಂಗ್ರೆಸ್
‘ಮಹಾನ್ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್ ಭಗತ್ ಸಿಂಗ್ ಅವರ ಪಠ್ಯಕ್ಕೆ ಕೊಕ್ ಕೊಟ್ಟು, ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠ. ಭಗತ್ ಸಿಂಗ್ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು ಭಗತ್ ಸಿಂಗ್ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ?’ ಎಂದು ಕಿಡಿಕಾರಿದ್ದಾರೆ.
ಭಗತ್ ಸಿಂಗ್ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್ ಸಿಂಗ್ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ? 4/7#ಪಠ್ಯಪುಸ್ತಕ_ಪಕ್ಷಪುಸ್ತಕ
— H D Kumaraswamy (@hd_kumaraswamy) May 17, 2022
‘ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್, ಆಹಾರ, ವ್ಯಾಪಾರ, ಹಲಾಲ್ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ. ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷ್ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ’ವೆಂದು ಕುಟುಕಿದ್ದಾರೆ.
ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷ್ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. 6/7#ಪಠ್ಯಪುಸ್ತಕ_ಪಕ್ಷಪುಸ್ತಕ
— H D Kumaraswamy (@hd_kumaraswamy) May 17, 2022
ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜೀವಂತವಾಗಿದೆಯೇ?: ಸಿದ್ದರಾಮಯ್ಯ ಟೀಕಾಪ್ರಹಾರ
‘ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು. "ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!"’ ಎಂದು ಎಚ್ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.