ಬೆಂಗಳೂರು: ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ಕ್ಷಮೆಯೇ ಇಲ್ಲ ಅಂತಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣ(Shivamogga Youth Murder Case) ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ‘ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ರಾಜ್ಯ ಸರ್ಕಾರಕ್ಕೆ ನನ್ನ ಒತ್ತಾಯ’ ಅಂತಾ ಹೇಳಿದ್ದಾರೆ.
ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತವೆ. ಇಂಥ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ. 2/6
— H D Kumaraswamy (@hd_kumaraswamy) February 21, 2022
ಇದನ್ನೂ ಓದಿ: CT Ravi : 'ಶಾಲೆಗಳಲ್ಲಿ ಮಾತ್ರವಲ್ಲ ಬೇರೆ ಕಡೆಯಲ್ಲೂ "ಬುರ್ಖಾ ಬ್ಯಾನ್" ಬಗ್ಗೆ ಚರ್ಚೆ ಆಗಬೇಕು'
‘ರಾಜ್ಯದಲ್ಲಿ ಇಂತಹ ಘಟನೆಗಳು ಪದೇ ಪದೆ ನಡೆಯುತ್ತವೆ. ಇಂತಹ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು(National Parties) ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ. ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇಂತಹ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರವನ್ನಿಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯವಿಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ ‘ಹಿಂಸಾ ರಾಜಕಾರಣ’ ಮಾಡಲು ಎರಡೂ ಪಕ್ಷಗಳು ಹೊರಟಿವೆ’ ಅಂತಾ ಕಿಡಿಕಾರಿದ್ದಾರೆ.
ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ.
ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ. ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ. 4/6— H D Kumaraswamy (@hd_kumaraswamy) February 21, 2022
‘ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ? ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ(BJP), ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ. ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿದ್ದಾರೆ’ ಅಂತಾ ಟೀಕಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆಗೆ ಖಂಡನೆ: ಹಂತಕರನ್ನು ಬಂಧಿಸುವಂತೆ ಸಿದ್ದರಾಮಯ್ಯ ಆಗ್ರಹ
ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? 6/6
— H D Kumaraswamy (@hd_kumaraswamy) February 21, 2022
‘ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ಕ್ಷಮೆಯೇ ಇಲ್ಲ. ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು?’ ಅಂತಾ ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.