ಬೆಂಗಳೂರು : ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ರಾಜಕೀಯ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಮೂರು ಪಕ್ಷಗಳು ಕಾರ್ಯತಂತ್ರಗಳನ್ನು ರೂಪಿಸಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಬಾದಾಮಿಯಿಂದ ಕೋಲಾರಕ್ಕೆ ತಮ್ಮ ಕ್ಷೇತ್ರವನ್ನು ಬದಲಿಸಿಕೊಂಡಿದ್ದಾರೆ. ಕೋಲಾರ ಜತೆಗೆ ವರುಣಾ ವಿಧಾನಸಭಾ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಸ್ಪರ್ಧಿಸಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇನ್ನು ಮೂಲಗಳ ಪ್ರಕಾರ 2018ರ ಚುನಾವಣೆಯಂತೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕೂಡಾ ಈ ಬಾರಿ ಎರಡು ಕ್ಷೇತ್ರಗಳಿಂದ ಅಖಾಡಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : Surya Mukundaraj : 'ಡಿಕೆ ರವಿ ಲವ್ ಕೇಸ್ ಬೆಳಕಿಗೆ ಬರಲಿಲ್ಲ, ರೋಹಿಣಿ ವಿರುದ್ಧ ದೂರು ದಾಖಲಾಗಲಿಲ್ಲ'
2018ರಲ್ಲಿ ರಾಮನಗರ ಮತ್ತು ಚನ್ನಪಟ್ಟಣದಿಂದ ಕುಮಾರಸ್ವಾಮಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಫಲಿತಾಂಶದ ಬಳಿಕ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ನಡೆದ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ರಾಮನಗರದಿಂದ ಗೆದ್ದು ಶಾಸಕಿಯಾಗಿ ಆಯ್ಕೆಯಾದರು.
ವರದಿಗಳ ಪ್ರಕಾರ, ಯಾವುದೇ ರಿಸ್ಕ್ ಬೇಡ ಎನ್ನುವ ಕಾರಣಕ್ಕೆ ಕುಮಾರಸ್ವಾಮಿ ಎರಡೂ ಸ್ಥಾನಗಳಲ್ಲಿ ನಾಮಪತ್ರ ಸಲ್ಲಿಸುವಂತೆ ಆಪ್ತರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಕುಮಾರಸ್ವಾಮಿ ಇನ್ನೂ ತಮ್ಮ ನಿರ್ಧಾರವನ್ನು ಹೇಳಿಲ್ಲ. ಇನ್ನು ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸಬೇಕು ಎನ್ನುವ ಒತ್ತಾಯ ಕೂಡಾ ಕೇಳಿ ಬರುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ : ಗಂಡನ ಜೊತೆ ಅಕ್ರಮವಾಗಿ ನೆಲೆಸಿದ್ದ ಪಾಕ್ ಯುವತಿ ಗಡಿಪಾರು : ಪಾಕ್'ಗೆ ಹೋಗಲ್ಲ ಎಂದು ಹೈಡ್ರಾಮ!
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಿಂದ ಯಾರೂ ಸ್ಪರ್ಧೆಗಿಳಿಯುತ್ತಾರೆ ಎಂಬುದರ ಮೇಲೆಯೂ ಕುಮಾರಸ್ವಾಮಿ ನಿರ್ಧಾರ ನಿಂತಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಆಂತರಿಕ ಸಮೀಕ್ಷೆ ನಡೆಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಸಮೀಕ್ಷಾ ವರದಿ ಆಧರಿಸಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕೇ, ಬೇಡವೇ ಎಂದು ಕುಮಾರಸ್ವಾಮಿ ನಿರ್ಧಾರ ಮಾಡಲಿದ್ದಾರೆ. ಇನ್ನು ಕೆಲವರ ಪ್ರಕಾರ ಚುನಾವಣಾ ದಿನಾಂಕ ಘೋಷಣೆಯಾಗುವವರೆಗೂ ಕುಮಾರಸ್ವಾಮಿ ಕಾಡು ನೋಡುವ ತಂತ್ರ ಅನುಸರಿಸಲಿದ್ದಾರೆ.
ಕೆಲ ದಿನಗಳ ಹಿಂದೆ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರದ ವೇಳೆ ಪುತ್ರ ನಿಖಿಲ್ಗೆ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದರು. ಅದರಂತೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.