ಮಾಲ್ ಆಫ್ ಏಷ್ಯಾದಲ್ಲಿ ಫುಡ್ ಟೆಸ್ಟಿಂಗ್ ಕೇಂದ್ರಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Food Testing Centre: ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್ ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. 

Written by - Prashobh Devanahalli | Last Updated : Oct 25, 2024, 08:04 PM IST
    • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು
    • ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ
    • ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ
ಮಾಲ್ ಆಫ್ ಏಷ್ಯಾದಲ್ಲಿ ಫುಡ್ ಟೆಸ್ಟಿಂಗ್ ಕೇಂದ್ರಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ title=
Health Minister Dinesh Gundu Rao

Health Minister Dinesh Gundurao: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಇಂದು ಆಹಾರ ತಪಾಸಣಾ ರಾಯಪಿಟ್ ಟೆಸ್ಟಿಂಗ್ ಕಿಟ್ಸ್ ಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಪರೀಕ್ಷಾ ವಿಧಾನವನ್ನ ಪರಿಶೀಲಿಸಿದ ಸಚಿವರು, ಆಹಾರ ಪದಾರ್ಥಗಳ ಟೆಸ್ಟಿಂಗ್ ಗೆ ಮುಂದಾಗುವ  ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:  ಈ ದಿನಾಂಕದಲ್ಲಿ ಜನಿಸಿದವರು ಸಾಕ್ಷಾತ್‌ ಲಕ್ಷ್ಮೀದೇವಿಯ ಕುಲದವರು... ಹೆಣ್ಣಾಗಿ ಹುಟ್ಟಿದರೆ ಸಿರಿಲಕ್ಷ್ಮೀಯೇ ಮನೆಗೆ ಬಂದಂತೆ! ಗಂಡನ ಪಾಲಿಗಂತೂ ಸಿರಿಸಂಪತ್ತು ತರುವ ಭಾಗ್ಯದೇವತೆಯೇ!

ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್ ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ.  ಸಾರ್ವಜನಿಕರು ಈ ಮಾಲ್‍ಗಳಲ್ಲಿ  ಪ್ರತಿ ದಿನ ಬಳಸುವ ಆಹಾರ ಪದಾರ್ಥಗಳಾದ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆ ಟೀ-ಪುಡಿ, ಉಪ್ಪು, ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಪನೀರ್, ಬೆಣ್ಣೆ, ತರಕಾರಿಗಳು, ಧನಿಯಾಪುಡಿ, ಕುಡಿಯುವ ನೀರು ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ತ್ವರಿತ ಪರೀಕ್ಷೆಗಳಿಂದ ಖಚಿತಪಡಿಸಿಕೊಳ್ಳಬಹುದು ಎಂದರು.

ಅಲ್ಲದೇ ಬೆಂಗಳೂರಿನ ತರಕಾರಿ ಮತ್ತು ಆಹಾರ ಧಾನ್ಯಗಳನ್ನ ಮಾರಾಟ ಮಾಡುವ ಮೋರ್, ರಿಲಾಯನ್ಸ್ ಫ್ರೆಸ್ ಸೇರಿದಂತೆ ಸೂಪರ್ ಮಾರ್ಕೆಟ್ ಗಳಲ್ಲೂ ಫುಡ್ ಟೆಸ್ಟಿಂಗ್ ಕಿಟ್ ಗಳನ್ನ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇದರಿಂದ ಹಣ್ಣು, ತರಕಾರಿಗಳು ಹಾಗೂ ಆಹಾರ ಧಾನ್ಯಗಳ ಗುಣಮಟ್ಟವನ್ನ ಪರಿಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಆಹಾರ ಗುಣಮಟ್ಟದ ವಿಚಾರದಲ್ಲಿ ಇತ್ತಿಚೆಗೆ ಹಲವು ಬಿಗಿ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಆಹಾರ ತಯಾರಕರಿಗೆ ತೊಂದರೆ ಕೊಡುವ ಉದ್ದೇಶದಿಂದಲ್ಲ. ಬದಲಿಗೆ ನಮ್ಮ ಜನರಲ್ಲಿ ಅರಿವು ಮೂಡಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.‌ ಶುದ್ಧವಾದ ಆಹಾರ ಸೇವನೆಯಿಂದ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಹೀಗಾಗಿ ಆಹಾರ ಕಲಬೆರಕೆಯ ನಿರ್ಮೂಲನೆಗಾಗಿ ಕೈ ಜೋಡಿಸುವಂತೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಿರುಪತಿ ಲಡ್ಡುವಿನ ಪ್ರಕರಣದ ಹಿನ್ನೆಲೆಯಲ್ಲಿ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನಗಳು ತಲೆದೂರಿದ್ದವು. ದನ ಮಾಂಸದ ಕೊಬ್ನಿನಾಂಶ ಬಳಸುತ್ತಿದ್ದಾರೆ ಎಂಬುದು ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಪತಂಜಲಿ ಸೇರಿದಂತೆ 230 ಬಗೆಯ ತುಪ್ಪಗಳನ್ನ ಪರೀಕ್ಷಿಸಲಾಗಿದ್ದು, ಯಾವುದೇ ತುಪ್ಪವು ಅನ್ ಸೇಫ್ ಎಂದು ಪತ್ತೆಯಾಗಿಲ್ಲ. ಅಲ್ಲದೇ ದನ ಮಾಂಸದ ಕೊಬ್ಬಿನಾಂಶ ತುಪ್ಪಗಳಲ್ಲಿ ಪತ್ತೆಯಾಗಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ದಿಶಾ ಅಂದ ನೋಡಿದ್ರೆ ಎಣ್ಣೆ ಹೊಡೆಯದೇ ನಶೆ ಏರುತ್ತೆ..! ಕ್ಯೂಟ್‌ ಫೋಟೋಸ್‌ ಇಲ್ಲಿವೆ

ಬೆಂಗಳೂರಿನ ಯಾವ ಮಾಲ್ ಗಳಲ್ಲಿದೆ ರ‌್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್ಸ್
ವೈಷ್ಣವಿ ಸಫೈರ್ ಸೆಂಟರ್ ತುಮಕೂರು ರಸ್ತೆ, ಎಲಿಮೆಂಟ್ಸ್ ಮಾಲ್ ಥಣಿಸಂದ್ರ, ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆ, ಮೀನಾಕ್ಷಿ ಮಾಲ್ ಬನ್ನೇರುಘಟ್ಟ ರಸ್ತೆ, ಶೋಭಾ ಮಾಲ್ ಚರ್ಚ್ ಸ್ಟ್ರೀಟ್, ಸೆಂಟ್ರಲ್ ಮಾಲ್ ಬೆಳ್ಳಂದೂರು, ಗೋಪಾಲನ್ ಸಿಗ್ನೇಚರ್ ಮಾಲ್ ಬೆನ್ನಿಗಾನಹಳ್ಳಿ, ನೆಕ್ಸಸ್ ಫೋರಂ ಮಾಲ್ ಕೋರಮಂಗಲ, ಭಾರತೀಯ ಮಾಲ್ ಆಫ್ ಬೆಂಗಳೂರು ಥಣಿಸಂದ್ರ ಹಾಗೂ ಮಾಗಡಿ ರಸ್ತೆಯಲ್ಲಿರುವ  ಜಿಟಿ ವಲ್ರ್ಡ್ ಮಾಲ್ ಗಳಲ್ಲಿ ಕಾರ್ಯಕ್ರಮ ಪ್ರಾರಂಭಿಸಲಾಗಿದೆ

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News