ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣ: ಪ್ರಹ್ಲಾದ ಜೋಶಿ

Prahlada Joshi: ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಿಸಲು ಇಂದು ಚಾಲನೆ ನೀಡಿರುವ ವಾಣಿಜ್ಯ ನಗರಿ ಹುಬ್ಬಳಿ ವಿಮಾನ ನಿಲ್ದಾಣ ಕಾಮಗಾರಿ ಇನ್ನೆರೆಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Written by - Savita M B | Last Updated : Mar 10, 2024, 02:47 PM IST
  • ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣ
  • ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ: 2ನೇ ಟರ್ಮಿನಲ್ ಗೆ ಇಂದು ಚಾಲನೆ
 ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣ: ಪ್ರಹ್ಲಾದ ಜೋಶಿ title=

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚ್ಯುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ವೇಳೆ ಮಾತನಾಡಿದರು.

340 ಕೋಟಿ ರು. ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಅನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅತ್ಯಂತ ವೇಗವಾಗಿ ಕಾಮಗಾರಿ ನಿರ್ವಹಿಸಲಾಗುತ್ತದೆ ಎಂದರು.

ಎರಡು ವರ್ಷದ ನಂತರ ಇಲ್ಲಿ 4ರಿಂದ 10 ವಿಮಾನಗಳ ಪಾರ್ಕಿಂಗ್ ವ್ಯವಸ್ಥೆ ಸಾಧ್ಯವಾಗಲಿದೆ. ನಿತ್ಯ 2400 ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದಾರೆ. ಇದರಲ್ಲಿ ಹುಬ್ಬಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿಯೂ ಒಂದು 350 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಮೂಲಸೌಕರ್ಯದೊಂದಿಗೆ ಹುಬ್ಬಳ್ಳಿ ಹೊಸ ಟರ್ಮಿನಲ್ ಕಂಗೊಳಿಸಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಭಿವೃದ್ಧಿ ಹೊಂದುತ್ತಿರುವ ಅವಳಿ ನಗರಗಳಿಗೆ ಈ ಹೊಸ ಕಾಮಗಾರಿ ಹೆಮ್ಮೆಯ ಗರಿಯಾಗಲಿದ್ದು, ವಿಕಸಿತ ಭಾರತಕ್ಕೆ ತನ್ನದೇ ಆದ ಕೊಡುಗೆ ನೀಡಲಿದೆ ಎಂದು ಸಚಿವ ಜೋಶಿ ಹೇಳುದರು.

ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಗರಿಕ  ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಎಮ್. ಆರ್ ಪಾಟೀಲ್, ಪ್ರಸಾದ ಅಬ್ಬಯ್ಯ, ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀಣಾ ಭಾರದ್ವಾಡ ಹಾಗು ವಿಮಾನ ನಿಲ್ದಾಣದ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News