ಹುಬ್ಬಳ್ಳಿ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ವಿಚಾರವಾಗಿ ಸಂಸದ ಡಿ.ಕೆ. ಸುರೇಶ ಹೇಳಿಕೆಗೆ ಸಚಿವ ಸಂತೋಷ ಲಾಡ್ ಸಹಮತ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ ಲಾಡ್, ಡಿ.ಕೆ. ಸುರೇಶ ಅವರ ಹೇಳಿಕೆಗೆ ನನ್ನ ಸಹಮತವಿದೆ. ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ ಪಾಲೆಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತವನ್ನು ಅಭಿವೃದ್ಧಿ ಪಡಿಸುವ ವಿಚಾರಕ್ಕೆ ನನ್ನದೂ ವಿರೋಧವಿದೆ. ಇದೇ ವಿಚಾರವನ್ನು ಡಿಕೆ ಸುರೇಶ ಹೇಳಿದ್ದಾರೆ ಎಂದರು.
ದಿನಂಪ್ರತಿ ಸಂವಿಧಾನ ಬದಲಿಸುವ, ತಿದ್ದುಪಡಿ ಬಗ್ಗೆ ಮಾತನಾಡುವ ಬಿಜೆಪಿ ಮುಖಂಡರದ್ದೂ ಭಾರತ ಒಡೆಯುವ ಯೋಚನೆಯೇ. ಈ ಹಿಂದೆಯೂ ಹಲವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಆಗ್ರಹಿಸಿದ್ದರು. ಅದು ಅವರ ಅಭಿಪ್ರಾಯ. 2014ರ ಮೊದಲು ಕೇಂದ್ರ ಸರ್ಕಾರ ದಕ್ಷಿಣ ಭಾರತಕ್ಕೆ ನೀಡುತ್ತಿದ್ದ ಅನುದಾನ 2014ರ ನಂತರ ದೊರೆಯುತ್ತಿಲ್ಲ ಎಂದವರು ಬೇಸರ ವ್ಯಕ್ತಪಡಿಸಿದರು.
ದೇಶದ 80ಕೋಟಿ ಜನರಿಗೆ ಅಕ್ಕಿ ಕೊಡುವುದು ನಮ್ಮ ಯೋಜನೆ. ಇಂದಿರಾ ಗಾಂಧಿ ಕಾಲದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಯಾದಾಗಿನಿಂದ ಅಕ್ಕಿ ಕೊಡುತ್ತಿದ್ದೇವೆ. ಆದರೆ, ಈಗ ಪ್ರಧಾನಿ ಮೋದಿ ತಾವು ಅಕ್ಕಿ ಕೊಡುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ವಿಧವೆಯರಿಗೆ, ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಮಾಸಾಶನ ನಿಗದಿಯಾಗಿದ್ದು ನಮ್ಮ ಅವಧಿಯಲ್ಲಿ. ಹೀಗಾಗಿ ಬಿಜೆಪಿಗರು ಏನು ಮಾಡಿದ್ದಾರೆ ಎಂಬುದು ಚರ್ಚೆಯಾಗಲಿ. ಮೇಕ್ ಇನ್ ಇಂಡಿಯಾ ಘೋಷಣೆಯಡಿ ಸೂಜಿಯನ್ನೂ ತಯಾರಿಸದ ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಾಗ್ಧಾಳಿ ನಡೆಸಿದರು.
ಜನರಿಗೆ ಕಾಂಗ್ರೆಸ್, ಬಿಜೆಪಿ ಮುಖ್ಯವಲ್ಲ. ಅವರ ಕಷ್ಟಗಳಿಗೆ ಮಿಡುಯುವ, ಕಣ್ಣೀರು ಒರೆಸುವವರೇ ಮುಖ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಇದರಿಂದ ಜನ ಸಂತೋಷವಾಗಿದ್ದಾರೆ. ತಾಂತ್ರಿಕ ಕಾರಣಗಳಿಂದ ಶೇ.4ರಷ್ಟು ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಅನುದಾನ ತಲುಪಿಲ್ಲ. ಅವರನ್ನೂ ಯೋಜನೆಗೆ ಒಳಪಡಿಸುವ ಉದ್ದೇಶದಿಂದ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.
ಇದನ್ನೂ ಓದಿ- ಕಲ್ಯಾಣ ಕರ್ನಾಟಕದ ಸ್ಥಳೀಯ ಆಡಳಿತ ಬಲವರ್ಧನೆಗಾಗಿ "ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್"
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿಗೆ ಮತ್ತೆ ಸೇರ್ಪಡೆಗೊಂಡಿರುವ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರು ಕಾಂಗ್ರೆಸ್ ಸೇರುವಾಗ ಅವರ ಜೊತೆ ಯಾರೂ ಬಂದಿಲ್ಲ. ಯಾರೂ ಬಾರದೇ ಇದ್ದಾಗ ಹೋಗುವ ಪ್ರಶ್ನೆಯೇ ಇಲ್ಲ. ಶೆಟ್ಟರ ಜೊತೆ ಕಾಂಗ್ರೆಸ್ ಸೇರಿದವರನ್ನು ನಾನು ನೋಡಿಲ್ಲ. ಹೀಗಾಗಿ ಶೆಟ್ಟರ ಹಿಂದೆ ಯಾರೂ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.