ಚನ್ನಪಟ್ಟಣ: 'ಯಾರನ್ನಾದರೂ ಮಂತ್ರಿ ಮಾಡಲಿ. ಅದಕ್ಕೆ ನಾನು ಹೆದರಿಕೊಳ್ಳುವ ವ್ಯಕ್ತಿಯಲ್ಲ. ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ' ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, 'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B.S.Yediyurappa) ನಮ್ಮ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ. ಯಾರನ್ನು ಮಂತ್ರಿ ಮಾಡಬೇಡಿ ಎಂದು ಹೇಳುವಷ್ಟು ಕೀಳುಮಟ್ಟಕ್ಕೆ ನಾನು ಇಳಿಯುವುದಿಲ್ಲ' ಎಂದರು.
ನಿಮ್ಮ ಮನೆಗೆ ಹೊಸದಾಗಿ ನೀರಿನ ನಳ ಸಂಪರ್ಕಕ್ಕಾಗಿ ಆನ್‍ಲೈನ್ ಅರ್ಜಿ ...!
'ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ. ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಹೇಳುವುದಕ್ಕಲ್ಲ. ಬಡವರ ಭೂಮಿ ಕಬಳಿಸಲು ಹೊರಟವರು ಮಂತ್ರಿಯಾಗಲು ಹೊರಟಿದ್ದಾರೆ. ಇಲ್ಲಿ ಯಾರೋ ಮಂತ್ರಿಯಾದರೆ ಹೆದರಿಕೊಂಡು ಹೋಗುವ ಜಾಯಮಾನ ನನ್ನದಲ್ಲ' ಎಂದರು.
ವಿಮುಕ್ತ ದೇವದಾಸಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸಹಾಯಧನ
'ನನ್ನ ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆಗೊಳಿಸುವ ಸಂಬಂಧ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೇನೆ. ಅದರ ಹೊರತು ರಾಜಕೀಯವಾಗಿ ಯಾವುದೇ ವಿಚಾರವನ್ನು ಚರ್ಚಿಸಿಲ್ಲ. ಮಂತ್ರಿ ಮಾಡಬೇಡಿ ಎಂದು ಹೇಳಲು ನಾನು ಭೇಟಿಯಾಗಿದ್ದೇನೆ ಎಂದು ಕೆಲವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಅವರು ಮಂತ್ರಿಯಾದರೇನು ಬಿಟ್ಟರೇನು. ನನ್ನ ಕೆಲಸ ನಾನು ಮಾಡುತ್ತೇನೆ' ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಹೆಸರು ಪ್ರಸ್ತಾಪಿಸದೆ ಹರಿಹಾಯ್ದರು.
ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀನಾಮೆ!