ನವದೆಹಲಿ: ಲೋಕಸಭಾ ಚುನಾವಣೆ 2019 ರಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ, ಗಾಂಧಿ ಕುಟುಂಬದ ಭದ್ರ ಕೋಟೆ ಅಮೇಥಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಅಮೇಥಿಯಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದ ಸ್ಮೃತಿ ಇರಾನಿ ಅವರ ಅಭಿಮಾನಿಗಳಿಗೇನು ಕೊರತೆಯಿಲ್ಲ. ಇಂಥ ಒಬ್ಬ ವ್ಯಕ್ತಿ ಇವರ ಪಕ್ಷದಲ್ಲೇ ಇದ್ದಾರೆ. ಲೋಕಸಭೆ ಚುನಾವಣೆ 2019 ರಲ್ಲಿ ಕಿರಿಯ ಸಂಸದರೊಬ್ಬರು ಬಿಜೆಪಿಯಿಂದ ಆಯ್ಕೆಯಾಗಿ ಸಂಸತ್ ಮೆಟ್ಟಿಲೇರಿದ್ದಾರೆ. ಅವರು ಮತ್ಯಾರೂ ಅಲ್ಲ ನಮ್ಮ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ.
ಮೇ. 25ರಂದು ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ನಡೆದ ಎನ್‍ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಮತ್ತು ಎನ್‍ಡಿಎ ನಾಯಕರು ಹಾಜರಿದ್ದರು. ಈ ಸಂದರ್ಭದಲ್ಲಿ ಹಾಜರಿದ್ದ ತೇಜಸ್ವಿ ಸೂರ್ಯ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು ನನ್ನ ನೆಚ್ಚಿನ ನಾಯಕಿಯೊಂದಿಗೆ ಈ ಸೆಲ್ಫಿಗಾಗಿ ಹಲವು ವರ್ಷಗಳಿಂದ ಕಾಯುತ್ತಿದ್ದೆ. ಲೆಕ್ಕವಿಲ್ಲದಷ್ಟು ಸಮಯವನ್ನು ಅವರ ಭಾಷಣ ಮತ್ತು ಸಂದರ್ಶನಗಳನ್ನು ಕೇಳಲು ಕಳೆದಿದ್ದೇನೆ. ಅಮೇಥಿಯಲ್ಲಿ ಅವರ ಗೆಲುವು ಪ್ರಜಾಪ್ರಭುತ್ವದಲ್ಲಿ ನಮ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.
Oh man!!
I had waited for this selfie with my favourite @smritiirani ji from such a long time. So many countless hours I have spent hearing her speeches & interviews!
Her victory in Amethi only reinforces our faith in democracy.
Smriti Ji you are a rockstar! 🤩 pic.twitter.com/zYsxIlp0Ka
— Tejasvi Surya (@Tejasvi_Surya) May 25, 2019
ಬಿಜೆಪಿ ಯುವ ನಾಯಕ, ತೇಜಸ್ವಿ ಸೂರ್ಯ ಕರ್ನಾಟಕದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಈ ಬಾರಿಯ ಲೋಕಸಭಾ ಚುನಾವಣೆ ಗೆದ್ದಿದ್ದಾರೆ. ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಅವರನ್ನು ಸೋಲಿಸಿದರು.