ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್. ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಇದನ್ನೂ ಓದಿ: ದೈವ ಕಾರ್ಯದಷ್ಟೇ ಶ್ರೇಷ್ಠವಾದದ್ದು ವೈದ್ಯರ ಕಾರ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಪ್ರಜಾ ಸರ್ಕಾರಕ್ಕೂ ಮುನ್ನ ರಾಜಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣಬಹುದು. ಕದಂಬರು ಕರ್ನಾಟಕದಲ್ಲಿ ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ. ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ. ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ ಎಂದು ತಿಳಿಸಿದರು.
ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕು
ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ ಎಸ್. ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ . ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.
ಸಮಾನತೆ ಸಾಧಿಸಲು ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ
ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ. ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.
ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಗೆ ಸಿಎಂ ಮೆಚ್ಚುಗೆ
ತೆರಿಗೆ ಸೋರಿಹೋಗದಂತೆ ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡುತ್ತದೆ. 2022-23 ನೇ ಸಾಲಿನಲ್ಲಿ 1.22,821 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಗೌತಮ್ ಗಂಭೀರ್ ಅಲ್ಲ, ಟೀಂ ಇಂಡಿಯಾದ ಮುಂದಿನ ಹೆಡ್ ಕೋಚ್ ಇವರೆಂದು ಖಚಿತಪಡಿಸಿದ ಜಯ್ ಶಾ! ಯಾರವರು?
ಹೆಚ್ಚಿನ ತೆರಿಗೆ ಸಂಗ್ರಹಕ್ಕೆ ಕಾರ್ಯಕ್ರಮ ಪ್ರೇರಣೆಯಾಗಲಿ
ವಾಣಿಜ್ಯ ತೆರಿಗೆ ಇಲಾಖೆಯ 65 ಜನರಿಗೆ ಪ್ರಶಸ್ತಿಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ