ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದೀಚೆಗೆ ಕೋವಿಡ್-19 ಸೋಂಕು ಹರಡುವಿಕೆಯ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಬೆಂಗಳೂರಿನಲ್ಲಿ (ಬಿಬಿಎಂಪಿ, ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳನ್ನು ಒಳಗೊಂಡಂತೆ) ಒಂಬತ್ತು ದಿನಗಳ ಲಾಕ್ಡೌನ್ (Lockdown) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋವಿಡ್ -19 (Covid-19) ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಹತೋಟಿಗೆ ತರಲು ತಜ್ಞರ ಸಲಹೆ ಮೇರೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದ್ದು ಬಿಬಿಎಂಪಿ ಪ್ರದೇಶ, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಳಗೊಂಡಿರುವ ಬೆಂಗಳೂರು ಪ್ರದೇಶಗಳಲ್ಲಿ ಇಂದು ರಾತ್ರಿ 8 ಗಂಟೆಯಿಂದ ಜುಲೈ 22 ರ ಬೆಳಿಗ್ಗೆ 5 ಗಂಟೆಯವರೆಗೆ ಈ ಲಾಕ್ಡೌನ್ ಮುಂದುವರಿಸಲಾಗಿದ್ದು ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಈ ಅವಧಿಗೆ ಕಠಿಣ ಮಾರ್ಗಸೂಚಿಗಳನ್ನು ವಿಧಿಸಿದೆ.
ಮಾರ್ಗಸೂಚಿಗಳ ಅನ್ವಯ ಈ ಅವಧಿಯಲ್ಲಿ ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಆದಾಗ್ಯೂ ಕಂಟೈನ್ಮೆಂಟ್ ವಲಯದ (Containment zone) ಹೊರಗಿನ ಪ್ರದೇಶಗಳಲ್ಲಿ ವಿನಾಯಿತಿ ನೀಡಲಾಗಿದೆ.
- ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹ ರಕ್ಷಣಾ ದಳ, ನಾಗರೀಕ ರಕ್ಷಣೆ, ಅಗ್ನಿಶಾಮಕ ಮತ್ತು
ತುರ್ತು ಸೇವೆಗಳಿಗೆ ವಿನಾಯಿತಿಗಳನ್ನು ನೀಡಲಾಗಿದೆ.
- ಅಗತ್ಯ ಸೇವೆಗಳಾದ ವಿದ್ಯುತ್, ನೀರು, ನೈರ್ಮಲ್ಯ ಇತ್ಯಾದಿಗಳನ್ನು ನಿರ್ವಹಿಸುವ ಎಲ್ಲಾ ಕಚೇರಿಗಳು ಬಿಬಿಎಂಪಿ ಮತ್ತು ಅಧೀನ ಕಚೇರಿಗಳು,
- ಬಿಬಿಎಂಪಿ ಹಾಗೂ ಅಧೀನ ಕಛೇರಿಗಳು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಅಧೀನ ಕಚೇರಿಗಳು ಸಹ ತೆರೆದಿರುತ್ತವೆ.
- ವಿಧಾನ ಸೌಧ, ವಿಕಾಸ್ ಸೌಧಾ ಮತ್ತು ಎಂಎಸ್ ಕಟ್ಟಡದಲ್ಲಿನ ಸೆಕ್ರೆಟರಿಯಟ್ ಕಚೇರಿಗಳು ಶೇಕಡಾ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲಿವೆ.
- ನ್ಯಾಯಾಲಯಗಳು ಹಾಗೂ ನ್ಯಾಯಾಂಗ ಕೆಲಸಗಳಿಗೆ ಸಂಬಂಧಿಸಿದ ಕಛೇರಿಗಳು ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯವಾಗಿ ಕಾರ್ಯನಿರ್ವಹಿಸಲಿವೆ.
- ಕರೋನಾವೈರಸ್ (Coronavirus) ಸಂಬಂಧಿತ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಕಛೇರಿಗಳು ಹಾಗೂ ಸ್ವಯಂ ಸೇವಕರು, ಇತರೆ ಎಲ್ಲಾ ಕಛೇರಿಗಳು ತಮ್ಮ ಸಿಬ್ಬಂಧಿಯನ್ನು ಮನೆಯಿಂದಲೇ ಕೆಲಸ ನಿರ್ವಹಿಸುವುದಕ್ಕೆ ಪ್ರೋತ್ಸಾಹಿಸುವುದು.
- ನಿರ್ಬಂಧಿತ ವಲಯ ಹೊರತುಪಡಿಸಿ ಎಲ್ಲಾ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುವುದು.
- ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಬೇರೆಡೆ ಎಲ್ಲಾ ಬಗೆಯ ಸರಕು ಸಾಗನೆಗಳ ಅನಿರ್ಬಂಧಿತ ಚಲನೆ ಇರಲಿದೆ.
ಬೆಂಗಳೂರು ಪ್ರದೇಶದಾದ್ಯಂತ ಈ ಕೆಳಕಂಡ ಕಾರ್ಯಚಟುವಟಿಕೆಗಳಿಗೆ ನಿಷೇಧವಿಧಿಸಲಾಗಿದೆ:
* ಈಗಾಗಲೇ ವೇಳಾಪಟ್ಟಿ ನಿಗಧಿಯಾಗಿರುವ ವಿಮಾನ ಹಾಗೂ ರೈಲುಗಳ ಪ್ರಯಾಣಿಕರಿಗೆ ಲಾಕ್ಡೌನ್ ಅವಧಿಯಲ್ಲಿ ಸಂಚಾರಕ್ಕೆ ತೊಂದರೆಯಾಗುವುದಿಲ್ಲ. ವಿಮಾನ ಮತ್ತು ರೈಲು ಟಿಕೇಟುಗಳನ್ನೂ ಪ್ರಯಾಣಿಕರ ಪಾಸುಗಲೆಂದು ಪರಿಗಣಿಸಲಾಗುವುದು. ಅಲ್ಲದೆ ಟ್ಯಾಕ್ಸಿ ಮತ್ತು ಆಟೋರಿಕ್ಷಾಗ್ಲಾ ಮೂಲಕ ನಿಲ್ದಾಣಕ್ಕೆ ಪ್ರಯಾಣಿಸಲು ಅನುಮತಿಸಿದೆ. ಆದರೆ ಯಾವುದೇ ಹೊಸ ವಿಮಾನ ಮತ್ತು ರೈಲು ಸಂಚಾರಕ್ಕೆ ಅವಕಾಶವಿರುವುದಿಲ್ಲ.
* ಶಾಲಾ-ಕಾಲೇಜು, ಶಿಕ್ಷಣ/ ತರಬೇತಿ/ ಕೋಚಿಂಗ್ ಮುಂತಾದ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ದೂರ ಶಿಕ್ಷಣ ಕಲಿಕೆಗೆ ಅವಕಾಶ.
* ಆರೋಗ್ಯ/ ಪೊಲೀಸ್/ ಸರ್ಕಾರಿ ಸೇವಾ ಸಿಬ್ಬಂಧಿ/ ಆರೋಗ್ಯ ಕಾರ್ಯಕರ್ತರು/ ಪ್ರವಾಸಿಗಳು ಸೇರಿದಂತೆ ಉದ್ದೇಶಿಸಿದ ಮತ್ತು ಕ್ವಾರಂಟೈನ್ ಸೌಲಭ್ಯಗಳಿಗೆ ಉದ್ದೇಶಿಸಿ ಉಳಿದಂತೆ ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಮತ್ತು ಇತರೆ ಆತಿಥ್ಯ ಸೇವೆಗಳ ನಿರ್ಬಂಧ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನೂ ಆಹಾರ ತಯಾರಿಕೆಗೆ / ಸರಬರಾಜು ಉದ್ದೇಶಕ್ಕಾಗಿ ಮಾತ್ರ ತೆರೆಯಲು ಅನುಮತಿಸಲಾಗಿದೆ.
* ಸಿನಿಮಾ ಮಂದಿರಗಳು, ಶಾಪಿಂಗ್ ಮಾಲ್ ಗಳು, ಜಿಮ್ ಗಳು, ಕ್ರೀಡಾ ಸಂಕೀರ್ಣಗಳು, ಸ್ವಿಮ್ಮಿಂಗ್ ಪೂಲ್ ಗಳು ತೆರೆಯುವಂತಿಲ್ಲ.
* ಸಭೆ- ಸಮಾರಂಭಗಳಿಗೆ ಅವಕಾಶವಿಲ್ಲ.
* ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳನ್ನು ಸಾರ್ವಜನಿಕರಿಗೆ ಮುಚ್ಚಬೇಕು. ಧಾರ್ಮಿಕ ಸಭೆಗಳಿಗೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.
ಕಂಟೈನ್ಮೆಂಟ್ ವಲಯಗಳು:
ಕಂಟೈನ್ಮೆಂಟ್ ವಲಯಗಳಲ್ಲಿ ಅತ್ಯಗತ್ಯ ಕಾರ್ಯಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ವೈದ್ಯಕೀಯ ತುರ್ತು ಸೇವೆಗಳ ಮತ್ತು ಅತ್ಯಗತ್ಯ ಸರಕು ಮತ್ತು ಸೇವೆಗಳ ಪೂರೈಕೆಯ ಹೊರತು ಈ ವಲಯಗಳಲ್ಲಿ ಮತ್ತು ವಲಯಗಳ ಹೊರಗೆ ವ್ಯಕ್ತಿಗಳ ಚಲನೆಗೆ ಕಟ್ಟುನಿಟ್ಟಾಗಿ ಕಡಿವಾಣ ಹಾಕಲಾಗಿದೆ.