ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಿದಿರಿ: ವಿಜಯೇಂದ್ರ ಆಗ್ರಹ

ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

Written by - Manjunath N | Last Updated : Oct 26, 2024, 06:15 PM IST
  • ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ.
  • ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ.
  • ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ.
ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಿದಿರಿ: ವಿಜಯೇಂದ್ರ ಆಗ್ರಹ title=

ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಇದನ್ನೂ ಓದಿ: 30 ಕೋಟಿ ಕಾರ್ಮಿಕರಿಗೆ ದೀಪಾವಳಿಯ ಬಂಪರ್ ಉಡುಗೊರೆ ಘೋಷಿಸಿದ ಕೇಂದ್ರ..! ಈಗ ಒಂದೇ ಕ್ಲಿಕ್‌ನಲ್ಲಿ ಈ ಸೌಲಭ್ಯ ನಿಮಗೂ ಲಭ್ಯ...!

ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ.ಅಲ್ಪಸಂಖ್ಯಾತರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಬೆಂಬಲ ವಕ್ಫ್ ಬೋರ್ಡ್‍ಗೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಟೀಕಿಸಿದರು.

ಈಗಾಗಲೇ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್‍ಡಿಎ ಸರಕಾರವು ವಕ್ಫ್ ಕಾಯಿದೆಯಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ.ಇನ್ನೊಂದೆಡೆ ಹೈಕೋರ್ಟ್, ಸುಪ್ರೀಂ ಕೋರ್ಟ್ ಇದ್ಯಾವುದೂ ಇಲ್ಲ; ವಕ್ಫ್ ಹೆಸರು ಹೇಳಿಕೊಂಡು ಯಾರೇನು ಬೇಕಾದರೂ ಲೂಟಿ ಮಾಡಬಹುದು ಎಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಯಾರಿಗೂ ಅನ್ಯಾಯ ಆಗಬಾರದು.ವಕ್ಫ್ ಕಾಯಿದೆಗೆ ಸುಧಾರಣೆ ತರಬೇಕು ಎಂದು ಕೇಂದ್ರ ಸರಕಾರ ಸಮಿತಿಯನ್ನು ರಚಿಸಿ ನಿನ್ನೆ- ಮೊನ್ನೆ ಚರ್ಚೆಯೂ ಆಗಿದೆ. ಆದರೆ, ಕರ್ನಾಟಕದ ವಿಜಾಪುರದಲ್ಲಿ ನಿನ್ನೆ ರೈತರು ಕಮಿಟಿ ಸದಸ್ಯರಾದ ಸಂಸದ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಿದ್ದಾರೆ ಎಂದು ವಿವರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News