ಬೆಂಗಳೂರು: 2020-21ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ.ಅರ್ಹರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಆಗಸ್ಟ್ 30,2020 ರ ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಇಲಾಖೆಯಿಂದ ದೃಢೀಕರಣ ಪಡೆದುhttp://karunadu.karnataka.gov.in/dyes ಈ ವೆಬ್ಸೈಟ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಿ ಎಂದು ಧಾರವಾಡ ಸಹಾಯಕ ನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.