Nikhil Kumaraswamy: ಜೆಡಿಎಸ್ ಮುಂದಿನ ಚುನಾವಣಾ ಪ್ಲ್ಯಾನ್ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ..!

ಮುಂಬರುವ ವಿಧಾನಸಭಾ ಸಭಾ ಚುನಾವಣೆಯಲ್ಲಿ ಜೆಡಿಎಸ್‌ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೆ ಏಕಾಂಗಿ ಚುನಾವಣೆ ಎದುರಿಸಲಿದೆ

Last Updated : Jan 29, 2021, 04:20 PM IST
  • ಮುಂಬರುವ ವಿಧಾನಸಭಾ ಸಭಾ ಚುನಾವಣೆಯಲ್ಲಿ ಜೆಡಿಎಸ್‌ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೆ ಏಕಾಂಗಿ ಚುನಾವಣೆ ಎದುರಿಸಲಿದೆ
  • ಜೆಡಿಎಸ್ ಮುಂದಿನ ಚುನಾವಣಾ ಪ್ಲ್ಯಾನ್ ಬಿಚ್ಚಿಟ್ಟ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
  • ಹಾರೋಹಳ್ಳಿ ಹೋಬಳಿಯ ಕೊಟ್ಟಗಾಳು ಗ್ರಾಮದ ಮಾರಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
Nikhil Kumaraswamy: ಜೆಡಿಎಸ್ ಮುಂದಿನ ಚುನಾವಣಾ ಪ್ಲ್ಯಾನ್ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ..! title=

 

 

ಕನಕಪುರ: ಮುಂಬರುವ ವಿಧಾನಸಭಾ ಸಭಾ ಚುನಾವಣೆಯಲ್ಲಿ ಜೆಡಿಎಸ್‌ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೆ ಏಕಾಂಗಿ ಚುನಾವಣೆ ಎದುರಿಸಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಹಾರೋಹಳ್ಳಿ ಹೋಬಳಿಯ ಕೊಟ್ಟಗಾಳು ಗ್ರಾಮದ ಮಾರಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಮಾತ​ನಾ​ಡಿದ ನಿಖಿಲ್ ಕುಮಾರಸ್ವಾಮಿ(Nikhil Kumaraswamy), ರಾಮನಗರ ವಿಧಾನಸಭಾ ಕ್ಷೇತ್ರ ನಮ್ಮ ತಂದೆ, ತಾಯಿಗಳಿಗೆ ಕರ್ಮಭೂಮಿಯಾಗಿದೆ. ಹೀಗಾಗಿ ಕ್ಷೇತ್ರದ ಅಭಿ​ವೃದ್ಧಿ ಹಾಗೂ ಪಕ್ಷ ಸಂಘ​ಟ​ನೆಗೆ ಹೆಚ್ಚಿನ ಆದ್ಯತೆ ನೀಡು​ತ್ತೇನೆ. ಹಳೇ ಮೈಸೂರು ಪ್ರಾಂತ್ಯವಾದ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‌ ಯುವ ಕಾರ್ಯಕರ್ತರ ಪಡೆ ಕಟ್ಟುವ ಉದ್ದೇಶದಿಂದ ಕ್ಷೇತ್ರದಾದ್ಯಂತ ಸಂಚರಿಸಿ ಯುವಕರನ್ನು ಜೆಡಿಎಸ್‌ ಪಕ್ಷಕ್ಕೆ ಸೆಳೆದು ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸು​ತ್ತೇನೆ ಎಂದು ಹೇಳಿ​ದರು.

Budget 2021: ಬಜೆಟ್ ಮಂಡನೆಗೆ ಸಿಎಂ ಬಿಎಸ್ ವೈ ತಯಾರಿ: ಪೂರ್ವಭಾವಿ ಸಭೆಗೆ ಡೇಟ್ಸ್ ಫಿಕ್ಸ್!

ನಾರಾಯಣಪುರ ಗ್ರಾಮದ ಜೆಡಿಎಸ್‌ ಕಾರ್ಯಕರ್ತ ಶ್ರೀಧರ್‌ ಅಕಾಲಿಕ ಮರಣ ಹೊಂದಿದ ಹಿನ್ನೆ​ಲೆ​ಯಲ್ಲಿ ಅವರ ಮನೆಗೆ ಭೇಟಿ ನೀಡಿದ ನಿಖಿಲ್‌ ಕುಮಾ​ರ​ಸ್ವಾಮಿ, ಕುಟುಂಬ​ದ​ವ​ರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಈ ಭಾಗದ ಯುವ ಮುಖಂಡ ಶ್ರೀಧರ್‌ ಅಕಾಲಿಕ ಮರಣಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಭೇಟಿ ನೀಡಿದ್ದೆ. ಅವರ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿರು​ವು​ದಾಗಿ ತಿಳಿ​ಸಿ​ದರು.

C.P.Yogeshwar: ವಿಧಾನಸೌಧದಲ್ಲಿ ಡಿಕೆಶಿ ಇದ್ದ ಕೊಠಡಿಯನ್ನೇ ಪಡೆದ ಸಿಪಿ ಯೋಗೇಶ್ವರ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News