ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯನವರ ಗ್ಯಾರಂಟಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ‘ಪ್ರಧಾನಿ ಮೋದಿಯವರ ‘ಸಬ್ ಕಾ ಸಾಥ್-ಸಬ್ ಕಾ ವಿಕಾಸ್’ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ’ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
‘ಶಾಲೆ - ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಮುಖ್ಯಮಂತ್ರಿಗಳು. ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ’ ಎಂದು ಬಿಜೆಪಿ ಟೀಕಿಸಿದೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ @siddaramaiah ಅವರ ಗ್ಯಾರಂಟಿ.
ಶಾಲೆ - ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ.
ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ… https://t.co/L4vtHXNPF7
— BJP Karnataka (@BJP4Karnataka) December 22, 2023
ಇದನ್ನೂ ಓದಿ: ಹಿಜಾಬ್ ನಿಷೇಧ ವಾಪಸ್ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದೇನು?
ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರ ಓಲೈಕೆಗಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತೇವೆ ಎನ್ನುವ ಸಂದೇಶವನ್ನು ಶಾಲೆಗಳಲ್ಲಿ ಹಿಜಾಬ್ ಜಾರಿಗೆ ತರುವುದರ ಮೂಲಕ ತುಷ್ಟೀಕರಣ ವಾದಿ @siddaramaiah ಅವರು ತೋರಿಸಿಕೊಟ್ಟಿದ್ದಾರೆ.
ಸ್ವಯಂಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ಸಾಹೇಬರು, ಶಾಲಾ ಸಮವಸ್ತ್ರದ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನೇ… pic.twitter.com/twg0e38oif
— BJP Karnataka (@BJP4Karnataka) December 23, 2023
‘ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರ ಓಲೈಕೆಗಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತೇವೆ ಎನ್ನುವ ಸಂದೇಶವನ್ನು ಶಾಲೆಗಳಲ್ಲಿ ಹಿಜಾಬ್ ಜಾರಿಗೆ ತರುವುದರ ಮೂಲಕ ತುಷ್ಟೀಕರಣವಾದಿ ಸಿದ್ದರಾಮಯ್ಯನವರು ತೋರಿಸಿಕೊಟ್ಟಿದ್ದಾರೆ. ಸ್ವಯಂಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ಸಾಹೇಬರು, ಶಾಲಾ ಸಮವಸ್ತ್ರದ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನೇ ಉಲ್ಲಂಘಿಸಿ ಹಿಜಾಬ್ ಜಾರಿಗೊಳಿಸುವುದನ್ನು ಯಾವ ಸಂವಿಧಾನದಲ್ಲಿದೆ ಎಂದು ತಿಳಿಸಬೇಕಿದೆ. ಅಂಬೇಡ್ಕರ್ ಸಂವಿಧಾನ ನಮಗೆ ಅನ್ವಯಿಸುವುದಿಲ್ಲವೆಂದು ಹೇಳುವವರ ಜೊತೆ ಸೇರಿ ಸಿದ್ದರಾಮಯ್ಯನವರು ಸಂವಿಧಾನವನ್ನು ಲೆಕ್ಕಿಸದೆ ವೋಟ್ ಬ್ಯಾಂಕ್ಗಾಗಿ ಒಂದು ಸಮುದಾಯದ ಅಡಿಯಾಳಾಗಿದ್ದಾರೆ’ ಎಂದು ಬಿಜೆಪಿ ಕುಟುಕಿದೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುತ್ತಿರುವ ಮಜವಾದಿ @siddaramaiah ಅವರ ಕೊಡುಗೆಗಳು:
▪ ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಹೇರಿಕೆ
▪ ಅಲ್ಪಸಂಖ್ಯಾತ ಮೌಲ್ವಿಗಳಿಗೆ ₹10 ಸಾವಿರ ಕೋಟಿ
▪ ಪಿಎಫ್ಐ ಗೂಂಡಾಗಳಿಗೆ ಅಮಾಯಕರ ಪಟ್ಟ
▪ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು
▪ ಪಠ್ಯಪುಸ್ತಕದಲ್ಲಿ ಧರ್ಮ, ಎಡಬಿಡಂಗಿ…— BJP Karnataka (@BJP4Karnataka) December 23, 2023
‘ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಹೇರಿಕೆ, ಅಲ್ಪಸಂಖ್ಯಾತ ಮೌಲ್ವಿಗಳಿಗೆ ₹10 ಸಾವಿರ ಕೋಟಿ, ಪಿಎಫ್ಐ ಗೂಂಡಾಗಳಿಗೆ ಅಮಾಯಕರ ಪಟ್ಟ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಮತ್ತು ಪಠ್ಯಪುಸ್ತಕದಲ್ಲಿ ಧರ್ಮ, ಎಡಬಿಡಂಗಿ ಸಿದ್ಧಾಂತ ಹೇರಿಕೆ ಇವು ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುತ್ತಿರುವ ಮಜವಾದಿ ಸಿದ್ದರಾಮಯ್ಯನವರ ಕೊಡುಗೆಗಳು. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪ್ರೀತಿಯ ಮಾರುಕಟ್ಟೆಯಲ್ಲಿ ದ್ವೇಷದ ಹೋಲ್ ಸೇಲ್ ಅಂಗಡಿಯನ್ನೇ ತೆರೆದಿದೆ’ ಎಂದು ಬಿಜೆಪಿ ಕಿಡಿಕಾರಿದೆ.
ಇದನ್ನೂ ಓದಿ: "ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ"
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.