ಬೆಂಗಳೂರು: ಸಾವಿರಾರು ಕೋಟಿ ರೂ. ಒಡೆಯನಾದರೂ ವಿಧಾನ ಪರಿಷತ್ ಚುನಾವಣೆ(Karnataka Council Election 2021)ಯಲ್ಲಿ ‘ಕೆಜಿಎಫ್ ಬಾಬು’ಗೆ ಅದೃಷ್ಟ ಕೈಕೊಟ್ಟಿದೆ. ಮಂಗಳವಾರ ಹೊರಬಿದ್ದ ಪರಿಷತ್ ಚುನಾವಣಾ ಫಲಿತಾಂಶದಲ್ಲಿ ಅವರು ಹೀನಾಯ ಸೋಲು ಕಂಡಿದ್ದಾರೆ. ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ನಗರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಚ್.ಎಸ್.ಗೋಪಿನಾಥ್ ರೆಡ್ಡಿ(H.S.Gopinath Reddy), ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸೂಫ್ ಶರೀಫ್ ಅಲಿಯಾಸ್ ‘ಕೆಜಿಎಫ್ ಬಾಬು’(KGF Babu) ಮತ್ತು ಪಕ್ಷೇತರ ಅಭ್ಯರ್ಥಿ ಯಾಗಿ ಶೀನಪ್ಪ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದರು. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ಇತ್ತು. ಆದರೆ 1250ಕ್ಕೂ ಹೆಚ್ಚು ಮತಗಳನ್ನು ಪಡೆದ ಗೋಪಿತಾಥ್ 400 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ 2.5 ಲಕ್ಷ ಕೋಟಿ ರೂ. ನಷ್ಟ: ಸಿದ್ದರಾಮಯ್ಯ
ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಗಳೂರು ನಗರ ಕ್ಷೇತ್ರದಲ್ಲಿ ವಿಜಯಗಳಿಸಿದ ಶ್ರೀ ಎಚ್. ಎಸ್. ಗೋಪಿನಾಥ್ ರೆಡ್ಡಿ ಅವರಿಗೆ ಅಭಿನಂದನೆಗಳು.#BJPWaveInKarnataka pic.twitter.com/0MM50AUeus
— BJP Karnataka (@BJP4Karnataka) December 14, 2021
ಗೋಪಿನಾಥ್ ಅವರು ಈ ಹಿಂದೆಯೂ ಚುನಾವಣೆ(Karnataka Legislative Council)ಗೆ ಸ್ಪರ್ಧಿಸಿ, ಕೆಲವೇ ಮತಗಳ ಅಂತರಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ವಿಜಯಲಕ್ಷ್ಮಿ ಅವರ ಕೈಹಿಡಿದಿದ್ದಾಳೆ. ಬಿಇ ಪದವೀಧರ ಆಗಿರುವ ಗೋಪಿನಾಥ್ ಬಿಜೆಪಿಯಲ್ಲಿ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ತಮ್ಮದೇ ಪಕ್ಷ ಆಡಳಿತದಲ್ಲಿರುವ ಕಾರಣ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಕೇಳಿ ಜಯ ಗಳಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai), ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಅಭಿನಂದನೆ ತಿಳಿಸಿದ್ದಾರೆ.
ಶ್ರೀಮಂತ ವ್ಯಕ್ತಿಗೆ ‘ಕೈ’ಕೊಟ್ಟ ಮತದಾರ..!
ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಅದೃಷ್ಟ ಪರೀಕ್ಷೆಗಿಳಿದಿದ್ದ ‘ಕೆಜಿಎಫ್ ಬಾಬು’(KGF Babu)ಗೆ ಮತದಾರ ಕೈಕೊಟ್ಟಿದ್ದಾನೆ. ರಾಜಕೀಯದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದ ಅವರಿಗೆ ವಿಜಯಲಕ್ಷ್ಮಿ ಒಲಿಯಲಿಲ್ಲ. ಪರಿಷತ್ ಚುನಾವಣೆಯಲ್ಲಿ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್(MTB Nagaraj) ಅವರನ್ನೂ ಮೀರಿಸಿ 1,744 ಕೋಟಿ ರೂ. ಆಸ್ತಿಯ ಒಡೆಯನಾಗಿ ಅವರು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿದ್ದರು. ಆದರೆ ಅದೃಷ್ಟ ಅವರ ಕೈಹಿಡಿಯಲಿಲ್ಲ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಐಷಾರಾಮಿ ಕಾರಿನಲ್ಲಿ ಬಂದಿದ್ದ ಕೆಜಿಎಫ್ ಬಾಬು ತಾವು ಸೋತಿರುವುದು ಗೊತ್ತಾಗುತ್ತಿದ್ದಂತೆ ಸಾಮಾನ್ಯರಂತೆ ಆಟೋ ಹತ್ತಿ ಹೊರಟು ಹೋಗಿದ್ದಾರೆ.
ಇದನ್ನೂ ಓದಿ: KPSC ಪರೀಕ್ಷೆಗೆ ಹೊರಟವರಿಗೆ ಅಡ್ಡುಗಾಲಾದ ರೈಲ್ವೆ ಕಾಮಗಾರಿ... ಟ್ರೈನ್ ತಡವಾಗಿದ್ದಕ್ಕೆ ಅಭ್ಯರ್ಥಿಗಳಿಂದ ಪ್ರತಿಭಟನೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.