Karnataka Government Finance Department Gazetted Probationers Recruitment : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಮತ್ತು ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಸಂದರ್ಶನಕ್ಕೆ 25 ಅಂಕಗಳನ್ನು ನಿಗದಿ ಮಾಡಲಾಗಿದ್ದು, 384 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಒಂದು ವರ್ಷದ ಕಾಲಮಿತಿ ನಿಗದಿ ಮಾಡಲಾಗಿದೆ. ಈ ನೇರ ನೇಮಕಾತಿ ಪ್ರಕ್ರಿಯೆ ಒಟ್ಟು 3 ಹಂತಗಳನ್ನು ಒಳಗೊಂಡಿದೆ. ಪೂರ್ವಭಾವಿ ಪರೀಕ್ಷೆಗೆ 400 ಅಂಕಗಳನ್ನು ನಿಗದಿಗೊಳಿಸಲಾಗಿದೆ.
ಕೆಎಎಸ್ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಕೆಪಿಎಸ್ಸಿ ನಡೆಸಲಿದೆ. ಈಗಾಗಲೇ ಡಿ. ಚಂದ್ರಕಲಾ, ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-7) ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಕಾರ್ಯದರ್ಶಿಗಳಿಗೆ ಪ್ರಕ್ರಿಯೆ ಆರಂಭಿಸಲು ಒಪ್ಪಿಗೆ ನೀಡಿ ಪತ್ರವನ್ನು ಬರೆದಿದ್ದಾರೆ.
ಇದನ್ನು ಓದಿ :ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು : ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮ
ಗ್ರೂಪ್-ಎ ಮತ್ತು ಗ್ರೂಪ್-ಬಿ ಎಂದು ಹುದ್ದೆಗಳನ್ನು ವರ್ಗೀಕರಣ ಮಾಡಲಾಗಿದೆ. ಗ್ರೂಪ್-ಎ ವಿಭಾಗದಲ್ಲಿ ಸಹಾಯಕ ಆಯುಕ್ತರು (ಕಿರಿಯ ಶ್ರೇಣಿ). ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಒಟ್ಟು 40. ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು. ವಾಣಿಜ್ಯ ತೆರಿಗೆ ಇಲಾಖೆಯ ಒಟ್ಟು 41. ಸಹಾಯಕ ನಿರ್ದೇಶಕರು. ಖಜಾನೆ ಇಲಾಖೆಯ ಒಟ್ಟು 2 ಹುದ್ದೆ ಭರ್ತಿ ಮಾಡಲಾಗುತ್ತದೆ.
ಕಾರ್ಯ ನಿರ್ವಾಹಕ ಅಧಿಕಾರಿ/ ಸಹಾಯಕ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಒಟ್ಟು 40. ಡಿವೈಎಸ್ಪಿ. ಒಳಾಡಳಿತ ಇಲಾಖೆಯ ಒಟ್ಟು 9. ಸಹಾಯಕ ನಿರ್ದೇಶಕರು ಗ್ರೇಡ್-1. ಸಮಾಜ ಕಲ್ಯಾಣ ಇಲಾಖೆಯ ಒಟ್ಟು 20. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/ ಸಹಾಯಕ ನಿರ್ದೇಶಕರು/ ಪ್ರಾಂಶುಪಾಲರು (ಪಿಇಟಿಸಿ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಒಟ್ಟು 7 ಹುದ್ದೆ ಭರ್ತಿಯಾಗಲಿದೆ.
ಇದನ್ನು ಓದಿ :Farting: ಹೂಸು ಬಿಡೋದು ಆರೋಗ್ಯಕ್ಕೆ ಒಳ್ಳೆದಾ, ಕೆಟ್ಟದ್ದಾ? ವೈದ್ಯರು ಈ ಬಗ್ಗೆ ಹೇಳೋದೇನು?
ಸಹಾಯಕ ನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಟ್ಟು 4. ಮುಖ್ಯಾಧಿಕಾರಿ (ಗ್ರೇಡ್-1) ನಗರಾಭಿವೃದ್ಧಿ ಇಲಾಖೆಯ ಒಟ್ಟು 1. ಸಹಾಯಕ ಖಜನಾಧಿಕಾರಿ. ಆರ್ಥಿಕ ಇಲಾಖೆ (ಖಜಾನೆ)ಯ ಒಟ್ಟು 46 ಹುದ್ದೆ ಭರ್ತಿ. ಸಹಾಯಕ ನಿರ್ದೇಶಕರು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಒಟ್ಟು 9. ಸಹಾಯಕ ನಿರ್ದೇಶಕರು. ಪ್ರವಾಸೋದ್ಯಮ ಇಲಾಖೆಯ ಒಟ್ಟು 2. ಶಾಖಾಧಿಕಾರಿ ಕರ್ನಾಟಕ ಸರ್ಕಾರದ ಸಚಿವಾಲಯದ ಒಟ್ಟು 5. ಸಹಾಯಕ ನಿರ್ದೇಶಕರು (ಗ್ರೇಡ್-2). ಸಮಾಜ ಕಲ್ಯಾಣ ಇಲಾಖೆಯ ಒಟ್ಟು 7 ಸ್ಥಾನ ಭರ್ತಿಯಾಗಲಿದೆ.
ಗ್ರೂಪ್-ಬಿ ವೃಂದದಲ್ಲಿ ತಹಶೀಲ್ದಾರ್ (ಗ್ರೇಡ್-2) ಕಂದಾಯ ಇಲಾಖೆಯ ಒಟ್ಟು 51. ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆಯ ಒಟ್ಟು 59. ಕಾರ್ಮಿಕ ಅಧಿಕಾರಿ, ಕಾರ್ಮಿಕ ಇಲಾಖೆಯ ಒಟ್ಟು 4. ಸಹಾಯಕ ಅಧೀಕ್ಷಕರು. ಒಳಾಡಳಿತ ಇಲಾಖೆ (ಕಾರಾಗೃಹ)ಯ ಒಟ್ಟು 3 ಹುದ್ದೆಗಳನ್ನು ತುಂಬಲಾಗುತ್ತದೆ. ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಹಕಾರ ಇಲಾಖೆಯ ಒಟ್ಟು 12. ಸಹಾಯಕ ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಒಟ್ಟು 9. ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ (ಅಬಕಾರಿ)ಯ ಒಟ್ಟು 10. ಉದ್ಯೋಗಾಧಿಕಾರಿ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಒಟ್ಟು 3 ಹುದ್ದೆ ಭರ್ತಿಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.