ನವದೆಹಲಿ: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ( Karnataka Flood)ದಿಂದ ಬರೋಬ್ಬರಿ 2.5 ಲಕ್ಷ ಕೋಟಿ ರೂ. ನಷ್ಟವುಂಟಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನಿಂದ(ಡಿ.13) ಪ್ರಾರಂಭವಾಗಿರುವ ಬೆಳಗಾವಿಯ ಚಳಿಗಾಲ ಅಧಿವೇಶನ(Belagavi Winter Session)ದಲ್ಲಿ ನಿಯಮ 60ರಡಿ ನಿಲುವಳಿ ಸೂಚನೆ ಮಂಡಿಸಿ ಅತಿವೃಷ್ಟಿಯಿಂದ ರಾಜ್ಯದಲ್ಲಿನ ಬೆಳೆಹಾನಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿರುವುದನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ @BJP4Karnataka ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸತತ 3 ವರ್ಷಗಳು ಪ್ರವಾಹ, ಅತಿವೃಷ್ಟಿ ಹಾಗೂ ಕೆಲವು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಕಂಡಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೂರು ಬಾರಿ ಪ್ರವಾಹ ಬಂದಿದೆ. 1/7#Session pic.twitter.com/nvM87C34UT
— Siddaramaiah (@siddaramaiah) December 13, 2021
‘ರಾಜ್ಯದಲ್ಲಿ ಬಿಜೆಪಿ(BJP)ಅಧಿಕಾರಕ್ಕೆ ಬಂದ ಮೇಲೆ ಸತತ 3 ವರ್ಷಗಳು ಪ್ರವಾಹ, ಅತಿವೃಷ್ಟಿ ಹಾಗೂ ಕೆಲವು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಕಂಡಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 3 ಬಾರಿ ಪ್ರವಾಹ ಬಂದಿದೆ. ಮೇ ತಿಂಗಳಲ್ಲಿ ತೌಕ್ತೆ ಚಂಡಮಾರುತ, ಜುಲೈ- ಆಗಸ್ಟ್ ನಲ್ಲಿ ಪ್ರವಾಹ ಹಾಗೂ ಅಕ್ಟೋಬರ್ - ನವೆಂಬರ್ ನಲ್ಲಿ ಅತಿವೃಷ್ಟಿ ಆಗಿದೆ. ಕಳೆದ 60 ವರ್ಷಗಳಲ್ಲೇ ಈ ವರ್ಷದ ನವೆಂಬರ್ ತಿಂಗಳಲ್ಲಿ ಆದಷ್ಟು ಮಳೆಯಾಗಿಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ 23 ಜಿಲ್ಲೆಗಳು ಅತಿವೃಷ್ಟಿಗೆ ಸಿಲುಕಿವೆ’ ಅಂತಾ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.
ಮೇ ತಿಂಗಳಲ್ಲಿ ತೌಕ್ತೆ ಚಂಡಮಾರುತ, ಜುಲೈ- ಆಗಸ್ಟ್ ನಲ್ಲಿ ಪ್ರವಾಹ ಹಾಗೂ ಅಕ್ಟೋಬರ್ - ನವೆಂಬರ್ ನಲ್ಲಿ ಅತಿವೃಷ್ಟಿ ಆಗಿದೆ. ಕಳೆದ 60 ವರ್ಷಗಳಲ್ಲೇ ಈ ವರ್ಷದ ನವೆಂಬರ್ ತಿಂಗಳಲ್ಲಿ ಆದಷ್ಟು ಮಳೆಯಾಗಿಲ್ಲ.
ರಾಜ್ಯದ 31 ಜಿಲ್ಲೆಗಳಲ್ಲಿ 23 ಜಿಲ್ಲೆಗಳು ಅತಿವೃಷ್ಟಿಗೆ ಸಿಲುಕಿವೆ. 2/7#Session— Siddaramaiah (@siddaramaiah) December 13, 2021
ಇದನ್ನೂ ಓದಿ: Patholes Of Bangalore: ಬೆಂಗಳೂರಿನ ತುಂಬಾ ಬಲಿಗಾಗಿ ಕಾದಿವೆ ರಸ್ತೆ ಗುಂಡಿಗಳು..!
‘ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ.75 ರಷ್ಟು ಬೆಳೆ ಹಾನಿ(Crop Losses)ಯಾಗಿದೆ. ಭತ್ತ, ರಾಗಿ, ಶೇಂಗಾ, ಮೆಕ್ಕೆಜೋಳ, ಕಾಫಿ, ಮೆಣಸು, ಅಡಿಕೆ ಮುಂತಾದ ಹಣ್ಣು, ತರಕಾರಿ, ಹೂವು ಬೆಳೆದ ರೈತರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಒಟ್ಟು ಈ ವರ್ಷ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಪ್ರವಾಹ, ಅತಿವೃಷ್ಟಿಗಳಿಂದ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ 2.5 ಲಕ್ಷ ಕೋಟಿ ರೂ. ನಷ್ಟವಾಗಿದೆ. ರಾಜ್ಯದ ರೈತರ ಕಷ್ಟವನ್ನು ನೆನೆದು ಸಂಕಟವಾಗುತ್ತಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ. 75 ರಷ್ಟು ಬೆಳೆ ಹಾನಿಯಾಗಿದೆ. ಭತ್ತ, ರಾಗಿ, ಶೇಂಗಾ, ಮೆಕ್ಕೆಜೋಳ, ಕಾಫಿ, ಮೆಣಸು, ಅಡಿಕೆ ಮುಂತಾದ ಹಣ್ಣು, ತರಕಾರಿ, ಹೂವು ಬೆಳೆದ ರೈತರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ. 3/7#Session
— Siddaramaiah (@siddaramaiah) December 13, 2021
‘ಅಕ್ಟೋಬರ್- ನವೆಂಬರ್ ನಲ್ಲಿ ವಾಡಿಕೆಯಂತೆ 166 ಮಿ.ಮೀ ಮಳೆ ಆಗಬೇಕಿತ್ತು. ಆದರೆ ಈ ವರ್ಷ 307 ಮಿ.ಮೀ ಮಳೆಯಾಗಿದೆ. ಇದರಿಂದ ಈ ತಿಂಗಳುಗಳಲ್ಲಿ ರೈತರ ಕೈಸೇರಬೇಕಿದ್ದ ಮುಂಗಾರು ಬೆಳೆಯ ಫಸಲು ಸಂಪೂರ್ಣ ನಷ್ಟವಾಗಿದೆ. ನಾನು ಹೋದ ಕಡೆಗಳಲ್ಲೆಲ್ಲಾ ಜನ ಬೆಳೆ ಪರಿಹಾರದ ಹಣ ಸಿಗೋಕೆ ನೀವೇ ಏನಾದ್ರೂ ಮಾಡಿ ಎಂದು ಒತ್ತಾಯ ಮಾಡುತ್ತಿದ್ದಾರೆ. ನಾಡಿನ ರೈತರ ಕಷ್ಟ ಹೇಳತೀರದಾಗಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಈ ವರ್ಷ ರಾಜ್ಯಕ್ಕೆ ನಯಾಪೈಸೆ ಪರಿಹಾರದ ಹಣ ಸಿಕ್ಕಿಲ್ಲ’ ಅಂತಾ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ.
ಇದನ್ನೂ ಓದಿ: Success Story: ಆಡುವ ವಯಸ್ಸಿನಲ್ಲಿಯೇ ಬಾಲಕಿಯ ಬೆಟ್ಟದಷ್ಟು ಸಾಧನೆ..!
ಒಟ್ಟು ಈ ವರ್ಷ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಪ್ರವಾಹ, ಅತಿವೃಷ್ಟಿಗಳಿಂದಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ರೂ. 2.5 ಲಕ್ಷ ಕೋಟಿ ನಷ್ಟವಾಗಿದೆ.
ರಾಜ್ಯದ ರೈತರ ಕಷ್ಟವನ್ನು ನೆನೆದು ಸಂಕಟವಾಗುತ್ತಿದೆ. 4/7#Session
— Siddaramaiah (@siddaramaiah) December 13, 2021
‘ಯುಪಿಎ ಸರ್ಕಾರ(UPA Govt.) ಇದ್ದಾಗ ರಾಜ್ಯದಿಂದ ಸಂಗ್ರಹವಾಗುತ್ತಿದ್ದ ತೆರಿಗೆ ಎಷ್ಟಿತ್ತು? ಕೇಂದ್ರದ ಬಜೆಟ್ ಗಾತ್ರ ಆಗ ಎಷ್ಟಿತ್ತು? ಈಗ ಎಷ್ಟಿದೆ? ಇವುಗಳ ವ್ಯತ್ಯಾಸವನ್ನೇ ಪರಿಗಣಿಸದೆ ನರೇಂದ್ರ ಮೋದಿ(Narendra Modi) ಅವರು ಪ್ರಧಾನಿಯಾದ ಮೇಲೆ ಹೆಚ್ಚು ಪರಿಹಾರದ ಹಣ ನೀಡಿದ್ದಾರೆ ಎನ್ನುವುದು ಬಿಜೆಪಿಯವರ ಆರ್ಥಿಕ ಜ್ಞಾನದ ಕೊರತೆಯನ್ನು ತೋರಿಸುತ್ತದೆ’ ಅಂತಾ ಟೀಕಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.