ಕುಮಾರವ್ಯಾಸ ಕನ್ನಡ ನಾಡಿನ ಸೌಭಾಗ್ಯ: ನಾಡೋಜ ಡಾ.ಮಹೇಶ ಜೋಶಿ

ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. 

Written by - Manjunath N | Last Updated : Jan 26, 2024, 12:10 AM IST
  • ರೂಪಕಗಳೊಂದಿಗೆ ಕುಮಾರವ್ಯಾಸನ ಇನ್ನೊಂದು ಸಾಮರ್ಥ್ಯ ಮಾನವಪ್ರಕೃತಿಯ ವರ್ಣನೆ
  • ಕುಮಾರವ್ಯಾಸನ ಪಾತ್ರಗಳು ಕಣ್ಣಿಗೆ ಕಟ್ಟುವಷ್ಟು ಸ್ಪಷ್ಟ
  • ಅವನ ಎಲ್ಲ ಪಾತ್ರಗಳು ಅವರವರದೇ ರೀತಿಯಲ್ಲಿ ಮಾತನಾಡುತ್ತಾರೆ
 ಕುಮಾರವ್ಯಾಸ ಕನ್ನಡ ನಾಡಿನ ಸೌಭಾಗ್ಯ: ನಾಡೋಜ ಡಾ.ಮಹೇಶ ಜೋಶಿ title=

ಬೆಂಗಳೂರು: ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅಭಿಪ್ರಾಯ ಪಟ್ಟರು. ಕುವೆಂಪು ‘ಕುಮಾರ ವ್ಯಾಸ ಯುಗ’ವೆಂದು ಕರೆದಿದ್ದು ಅದು ರೂಪಿಸಿದ ಪರಂಪರೆಯ ಹಿನ್ನೆಲೆಯಲ್ಲಿ ಎಂದು ಅವರು ಹೇಳಿದರು. ನಾಡೋಜ ಡಾ.ಮಹೇಶ ಜೋಶಿಯವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡದ ಕುಮಾರ ವ್ಯಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

.ಸಂಪೂರ್ಣ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿತವಾಗಿದ್ದು ಕುಮಾರವ್ಯಾಸನ ಕಾವ್ಯ ಪ್ರತಿಭೆ ಓದುಗರನ್ನು ದಂಗುಬಡಿಸುತ್ತದೆ. ಅವನ ಕಾವ್ಯಪ್ರತಿಭೆ ಪೂರ್ಣಶಕ್ತಿಯಲ್ಲಿ ಹೊರಹೊಮ್ಮುವುದು ಅವನ ರೂಪಕಗಳಲ್ಲಿ. ಕುಮಾರವ್ಯಾಸನ ರೂಪಕಗಳ ವೈವಿಧ್ಯತೆ ಮತ್ತು ಆಳ ಅಪಾರವಾದದ್ದು. ಇದೇ ಕಾರಣಕ್ಕಾಗಿ ಕುಮಾರವ್ಯಾಸನ ಹೆಸರು ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂದೇ ಖ್ಯಾತಿ ಪಡೆದಿದೆ.

ಇದನ್ನೂ ಓದಿ: ʼಬಾಬ್ರಿ ಮಸೀದ್‌ ಜೀವಂತವಾಗಿದೆʼ ಭಾರತದಲ್ಲಿ ಕೋಮುಗಲಭೆ ಎಬ್ಬಿಸಲು ʼಪಾಕ್‌ʼ ಸಂಚು.!

ರೂಪಕಗಳೊಂದಿಗೆ ಕುಮಾರವ್ಯಾಸನ ಇನ್ನೊಂದು ಸಾಮರ್ಥ್ಯ ಮಾನವಪ್ರಕೃತಿಯ ವರ್ಣನೆ. ಕುಮಾರವ್ಯಾಸನ ಪಾತ್ರಗಳು ಕಣ್ಣಿಗೆ ಕಟ್ಟುವಷ್ಟು ಸ್ಪಷ್ಟ. ಅವನ ಎಲ್ಲ ಪಾತ್ರಗಳು ಅವರವರದೇ ರೀತಿಯಲ್ಲಿ ಮಾತನಾಡುತ್ತಾರೆ, ಬೈಯುತ್ತಾರೆ, ನಗುತ್ತಾರೆ, ಹಾಗೂ ಅಳುತ್ತಾರೆ ಸಹ. ಕುಮಾರವ್ಯಾಸ ಅಷ್ಟೇ ಆಳವಾದ ದೈವಭಕ್ತ ಸಹ. ಶ್ರೀ ಕೃಷ್ಣನ ವರ್ಣನೆ ಅವನ ಕಾವ್ಯರಚನೆಯ ಮೂಲೋದ್ದೇಶಗಳಲ್ಲಿ ಒಂದು. ಗದುಗಿನ ವೀರ ನಾರಾಯಣನ ಎದುರು ಒದ್ದೆ ಬಟ್ಟೆಯುಟ್ಟು ಅದು ಒಣಗುವವರೆಗೂ ಕುಮಾರ ವ್ಯಾಸ ಬರೆಯುತ್ತಿದ್ದನೆಂಬ ನಂಬಿಕೆ ಇದೆ. ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಕೇವಲ ಎರಡು ರೂಪಾಯಿ ಬೆಲೆಯಲ್ಲಿ ಕುಮಾರ ವ್ಯಾಸ ಭಾರತವನ್ನು ಪ್ರಕಟಿಸಿ ನಾಡಿನ ಮೂಲೆ ಮೂಲೆಗೆ ತಲುಪಿಸುವ ವ್ಯವಸ್ಥೆ ಮಾಡಿದರು. ಗಮಕಿಗಳು ನಾಡಿನೆಲ್ಲೆಡೆ ಕುಮಾರ ವ್ಯಾಸನನ್ನು ತಲುಪಿಸಲು ಇದು ಕಾರಣವಾಯಿತು ಎಂದು ನಾಡೋಜ ಡಾ.ಮಹೇಶ ಜೋಶಿಯವರು ಹೇಳಿದರು.

ಹಿರಿಯ ಬರಹಗಾರರಾದ ಪ್ರೊ. ಕೆ.ಎಸ್.ಭಗವಾನ್ ಅವರು ಮಾತನಾಡಿ ಕನ್ನಡದ ಪುಣ್ಯ ಪ್ರತಿ ಕಾಲಘಟ್ಟದಲ್ಲಿಯೂ ಪಂಪ, ಬಸವಣ್ಣ, ಕುಮಾರ ವ್ಯಾಸ, ಕುವೆಂಪು ಮಹಾಕವಿಗಳಾಗಿ ಹುಟ್ಟಿ ಬಂದಿದ್ದಾರೆ. ಕುವೆಂಪು ಅವರು ವರ್ಣಿಸಿದಂತೆ ಕುಮಾರ ವ್ಯಾಸನು ಹಾಡಿದನೆಂದರೆ ಕಲಿಯುಗ ‍ ದ್ವಾಪರವಾಗುವುದು. ಕುಮಾರ ವ್ಯಾಸನನ್ನು ಚೆನ್ನಾಗಿ ಅರ್ಥ ಮಾಡಿ ಕೊಳ್ಳಲು ತ.ಸು.ಶಾಮರಾಯರು ‘ಕುಮಾರ ವ್ಯಾಸ ನಿಘಂಟನ್ನು ರಚಿಸಿದ್ದು ಅದು ಎಲ್ಲರಿಗೂ ತಲುಪುವಂತೆ ಕನ್ನಡ ಸಾಹಿತ್ಯ ಪರಿಷತ್ತು ಮಾಡಬೇಕೆಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್.ಶ್ರೀಧರ ಮೂರ್ತಿಯವರು ಮಾತನಾಡಿ ಕುಮಾರ ವ್ಯಾಸ ಜನ ಸಾಮಾನ್ಯರನ್ನು ಪೌರಾಣಿಕತೆಯ ಎತ್ತರಕ್ಕೆ ಏರಿಸಿದ ಕವಿ. ಅವನ ಪಾತ್ರಗಳು ಸರಳವಾಗಿ ಸಹಜವಾಗಿ ಜನರಿಗೆ ಸ್ಪಂದಿಸಿದವು ಇಲ್ಲಿ ಶ್ರೀಕೃಷ್ಣ ‘ಪಾರ್ಥನ ಬಂಡಿಯ ಬೋವ’ನಾಗುತ್ತಾನೆ, ಭೀಷ್ಮರೆದುರು ಚಕ್ರವ ಬಿಚ್ಚಿದವ ‘ನಾಚಿ ಮುಚ್ಚುತ್ತಾನೆ’ ಇದು ಬೃಹತ್ ಮತ್ತು ಮಹತ್ ಎರಡನ್ನೂ ಒಂದುಗೂಡಿಸಿ ಕೊಂಡ ಕಾವ್ಯ ಎಂದು ಹೇಳಿ ಕೆಲವು ಕುತೂಹಲಕರ ಪದ್ಯಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಮಾರ ವ್ಯಾಸನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ, ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಸೇರಿದಂತೆ ಪರಿಷತ್ತಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News