ಬೆಂಗಳೂರು:ಹಾಸನ ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ವರ್ಗಾವಣೆಯನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆಯಲು ಮಾಜಿ ಪ್ರಧಾನಿ ದೇವೇಗೌಡ ಮುಂದಾಗಿದ್ದಾರೆ, ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿರುವ ಅವರು ಸರ್ಕಾರದ ಈ ಕೆಟ್ಟ ನಡೆಗಳ ಬಗ್ಗೆ ಸಂಪೂರ್ಣವಾಗಿ ಪತ್ರದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಹಾಮಸ್ತಾಭಿಷೇಕ ಕಾರ್ಯಕ್ರಮದಲ್ಲಿ ಕಳಪೆ ಕಾಮಗಾರಿಗೆ ತಡೆಯೊಡ್ಡಿದ್ದರಿಂದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜುರವರ ಕುಮ್ಮಕ್ಕಿನಿಂದ ರೋಹಿಣಿ ಸಿಂಧೂರಿಯವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಆರೋಪಿಸಿದ್ದಾರೆ.
ಮಹಾಮಸ್ತಾಭಿಷೆಕದ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರ ಎದುರಲ್ಲೇ ಡಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು ಎನ್ನಲಾಗಿದೆ ಹಾಗಾಗಿ ಅವರನ್ನು ಸರ್ಕಾರ ಎತ್ತಂಗಡಿ ಮಾಡಲಾಗಿದೆ. ಆದ್ದರಿಂದ ರಾಜ್ಯ ಸರಕಾದ ಈ ಎಲ್ಲ ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರವಾಗಿ ಪತ್ರದಲ್ಲಿ ಬರೆಯುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ರವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.