ಬೆಂಗಳೂರು : ಸರ್ಕಾರ ಕೋವಿಡ್ -19 ನಿಗ್ರಹಕ್ಕೆ ವೀಕೆಂಡ್ ಕರ್ಫ್ಯೂ (Weekend Curfew), ನೈಟ್ ಕರ್ಫ್ಯೂ ಸೇರಿದಂತೆ ಕೆಲ ನಿರ್ಬಂಧನೆಗಳನ್ನ ಹೇರಿದ್ದು, ಈಗ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟಿದ್ದು ಎಂದು ಅಭಕಾರಿ ಇಲಾಖೆ ಆದೇಶ ಹೊರಡಿಸಿದೆ.
ವೀಕೆಂಡ್ ಕರ್ಫ್ಯೂ(Weekend Curfew) ನಲ್ಲಿ ಮದ್ಯ ಮಾರಾಟ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು,ಪ್ರಾದೇಶಿಕ ಅವಶ್ಯಕತೆಗಳಿಗೆ ಆನುಗುಣವಾಗಿ ಅಯಾ ಜಿಲ್ಲಾಧಿಕಾರಿಗಳು ಮದ್ಯ ಮಾರಾಟ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಬಹುದು ಎಂದು ಹೇಳಿದೆ.
ಇದನ್ನೂ ಓದಿ : ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್
ಒಂದು ಕಡೆ ವೀಕೆಂಡ್ ಕರ್ಫ್ಯೂ ವಿಧಿಸಿ ಸರ್ಕಾರ ಆದೇಶಿಸಿದೆ ಮತ್ತೊಂದು ಕಡೆ ಖಜಾನೆ ತುಂಬಿಸಲು ಬಾರ್ ಗಳಿಗೆ ಮದ್ಯ ಮಾರಾಟ(Liquor sale) ಮಾಡಲು ಅವಕಾಶ ನೀಡಿದ್ದಕ್ಕೆ ಈಗಾಗಲೇ ಸರ್ಕಾರ ವಿರುದ್ಧ ಟೀಕೆಗಳು ಹೆಚ್ಚಾಗುತ್ತಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.